ಎಚ್ ಡಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟಿನಲ್ಲಿ ಬಿಗ್ ರಿಲೀಫ್

5 months ago

ಬೆಂಗಳೂರು: ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ನಾಯಕ ಎಚ್ ಡಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟಿನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಇವರ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳ ಆರೋಪವನ್ನು ಹೈಕೋರ್ಟ್ ರದ್ದುಪಡಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಹರ್ಟ್ ಅರ್ಜಿ ನಡೆಸಿದ ನ್ಯಾಯಮೂರ್ತಿ ಎಂ ಐ ಅರುಣ್ ಅವರು, ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಕೆಲ ಅಂಶಗಳನ್ನು ಕೈ ಬಿಡಲು ಸೂಚನೆ ನೀಡಿದೆ.

ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧೀನ ನ್ಯಾಯಾಲಯ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪದಲ್ಲಿ ಸಂಜ್ಞೆ ಅಂಶವನ್ನು ಪರಿಗಣಿಸಿದ್ದನ್ನು ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ ರೇವಣ್ಣ ವಿರುದ್ಧ ದಾಖಲಾಗಿರುವ ದೂರಿನಲ್ಲಿ ಆರೋಪಿಸಿರುವ ಅಂಶಗಳು ಐಪಿಸಿ ಕಲಂ 354 ಎ ಅಡಿಯಲ್ಲಿ ಬರುತ್ತವೆ. ಆದರೆ ಇಲ್ಲಿ ಐಪಿಸಿ ಕಲಂ 354ನ್ನು ಅನ್ವಯಿಸಲಾಗಿದೆ. ಹೀಗಾಗಿ ಇವರ ವಿರುದ್ಧ ದಾಖಲಾಗಿರುವ ಪ್ರಕರಣ ಘನತೆಗೆ ಹಾನಿ ಮಾಡುವ ಉದ್ದೇಶ ತೋರುವುದಿಲ್ಲ. ಇದು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬಹುದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ 2024ರ ಏಪ್ರಿಲ್ 28 ರಂದು ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ ಪ್ರಕರಣ 354A, 354D, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ರೇವಣ್ಣ ಅವರು ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಲ್ಲದೇ ತಮ್ಮ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡುತ್ತಿದ್ದು, ಮಗಳು ಹೆದರಿ ನಂಬರ್ ಬ್ಲಾಕ್ ಮಾಡಿಕೊಂಡಿದ್ದಳು. ಇದರಿಂದ ತಾನು ಕೆಲಸ ತೊರೆದಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.

ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹಾಗೆಯೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಒಬ್ಬ ಮಹಿಳೆ ತನ್ನೊಂದಿಗೆ ಕೆಲಸ ಮಾಡುತ್ತಿದ್ದರು. ಆಕೆಯೊಂದಿಗೆ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯದ ವಿಡಿಯೋ ನೋಡಿ ಭಯವಾಗಿದ್ದು, ತನ್ನ ಪತಿ ಕೂಡ ತನ್ನ ಶೀಲ ಶಂಕಿಸುತ್ತಿದ್ದಾರೆ. ವಿಡಿಯೋ ಬಹಿರಂಗಗೊಂಡರೆ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದ್ದರು. ಇದರಿಂದ ಮಾನಸಿಕ ಹಿಂಸೆ ಆಗಿದೆ ಎಂದು ದೂರಿನಲ್ಲಿ ವಿವರಿಸಿದ್ದರು.

ತಮಗೆ ಜೀವ ಭಯ ಇರುವುದರಿಂದ ತಮಗೆ ಹಾಗೂ ತಮ್ಮ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದರು.

Leave a Reply