ಬೆಂಗಳೂರು: ಅನಧಿಕೃತವಾಗಿ ಬಾಲಕಿಯನ್ನು ಮನೆಯಲ್ಲಿ ಇಟ್ಟಿಕೊಂಡಿರುವ ಹಿನ್ನೆಲೆಯಲ್ಲಿ ಬಿಗ್ಬಾಸ್ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಮಕ್ಕಳ ರಕ್ಷಣಾ ಕಚೇರಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಸೋನು ಶ್ರೀನಿವಾಸ ಗೌಡ ಅವರನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಸೋನು ಗೌಡ ಟ್ರೋಲ್ ಆಗಿದ್ದು, ಮಕ್ಕಳ ಹಕ್ಕು ಕಸಿದಿರುವ ಅರೋಪದ ಮೇಲೆ ಬಂಧಿಸಲಾಗಿದೆ.
ಉತ್ತರ ಕರ್ನಾಟಕದ 8 ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದೇನೆ ಎಂದು ಹೇಳಿದ್ದ ಸೋನು ಸಿಂಪತಿ ಗಿಟ್ಟಿಸಿಕೊಂಡು ಖ್ಯಾತಿ ಪಡೆಯಲು ಮುಂದಾಗಿದ್ದರು ಎನ್ನುವ ಆರೋಪ ಕೇಳಿಬಂದಿದೆ. ದತ್ತು ತೆಗೆದುಕೊಂಡಿರುವ ಕುರಿತು, ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ ವಿಡಿಯೋದಲ್ಲಿ ಮಗುವಿನ ಮಾಹಿತಿ ಹಂಚಿಕೊಂಡಿದ್ದರಿಂದ ಸೋನು ಗೌಡ ಅವರನ್ನು ಜೆಜೆ ಕಾಯ್ದೆ ಅಡಿಯಲ್ಲಿ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕೆಲ ತಿಂಗಳಿಂದ ಸೋನು ಗೌಡ ಅವರು ಸೇವಂತಿ ಎನ್ನುವ ಬಾಲಕಿಗೆ ಮನೆಯಲ್ಲಿ ಊಟ ಹಾಕಿಸುವುದು, ಮೂಗು ಚುಚ್ಚಿಸಿ ಮೂಗುತಿ ಹಾಕುವುದು, ಊಟ ಮಾಡಿಸುವ ವಿಡಿಯೋ ಮಾಡಿ, ಅದನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದರು.
ಮನೆಯ ಸುತ್ತ ಇರುವ ನಾಯಿಗಳಿಗೆ ಬಿಸ್ಕಟ್ ಹಾಕುವಾಗ ನನಗೆ ಸೇವಂತಿ ಎನ್ನುವ 7 ವರ್ಷದ ಮಗುವಿನ ಪರಿಚಯ ಆಯ್ತು ಎಂದು ಸೋನು ಹೇಳಿಕೊಂಡಿದ್ದರು. ಮಾತ್ರವಲ್ಲ ಈ ಮುಂಚೆ ಸೇವಂತಿಯನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದರೆ ಅವರ ತಾಯಿ ಒಪ್ಪಿಲ್ಲ. ಬಳಿಕ ಕಾನೂನ ಪ್ರಕಾರ ಸೇವಂತಿಯನ್ನು ಪಡೆದೆ. ಅದಕ್ಕೆ 3 ತಿಂಗಳೇ ತೆಗೆದುಕೊಂಡಿದೆ. ಬಡ ಹುಡುಗಿಯನ್ನು ಮನೆಗೆ ಕರೆದುಕೊಂಡು ಬಂದಿದ್ದೀನಿ ಎಂದರೆ ಮೆಚ್ಚುಗೆ ಸೂಚಿಸಿ, ಇಲ್ಲ ಅಂದರೆ ಸುಮ್ಮನೆ ಇರಿ. ನೆಗೆಟಿವ್ ಕಮೆಂಟ್ ಮಾಡುವರಿಗೆ ನಾನು ಸೈಬರ್ ಕ್ರೈಂಗೆ ದೂರು ಕೊಡ್ತೀನಿ ಎಂದು ಈ ಹಿಂದೆ ವಿಡಿಯೋ ಮೂಲಕ ಹೇಳಿದ್ದರು.
ಮಗು ದತ್ತು ಸಂಬಂಧ ಸೋನು ಗೌಡ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ದೂರು ದಾಖಲಾಗಿತ್ತು.




