ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮುನಿ ರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಮಾಡಿದ್ದ ಅತ್ಯಾಚಾರ ಆರೋಪ ದೂರಿನ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮಾಡಿತ್ತು. ಈ ಕುರಿತು ಎಸ್ಐಟಿ ತನಿಖೆ ಪೂರ್ಣಗೊಳಿಸಿದ್ದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ಮುನಿರತ್ನ ವಿರುದ್ಧ ಮಾಡಲಾದ ಆರೋಪಕ್ಕೆ ಸಂಬಂಧಪಟ್ಟಂತೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಸಂತ್ರಸ್ತೆ ನೀಡಿದ ದೂರಿನಂತೆ ಶಾಸಕರು ಅತ್ಯಾಚಾರ ನಡೆಸಿರುವ ಬಗ್ಗೆ ಯಾವುದೇ ಸೂಕ್ತ ದಾಖಲೆಗಳು ಲಭಿಸಿಲ್ಲ ಎಂದು ಹೇಳಿದೆ.
ಇದರಿಂದಾಗಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಮುನಿರತ್ನಗೆ ಕಾನೂನು ಹೋರಾಟದಲ್ಲಿ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸುವುದಷ್ಟೇ ಬಾಕಿ ಇದೆ.
ಮುನಿರತ್ನ ವಿರುದ್ಧ ಬಿಜೆಪಿ ಕಾರ್ಯಕರ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪ ಪ್ರಕರಣ ದಾಖಲಿಸಿ ಎಫ್‌ಐಆರ್ ಮಾಡಲಾಗಿತ್ತು. ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ಹಾಗೂ ಒಬ್ಬ ಅಪರಿಚಿತನ ವಿರುದ್ಧವೂ ಬೆಂಗಳೂರಿನ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಮುನಿರತ್ನ ವಿರುದ್ಧ ದೂರು ನೀಡಿದ ಮಹಿಳೆ, ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೆ. ನನ್ನ ಗಂಡ ಬಿಟ್ಟು ಹೋದ ಬಳಿಕ 2ನೇ ಮದುವೆ ಆಗಿ ಜೀವನ ನಡೆಸುತ್ತಿದ್ದೆ. ಈ ಹಿಂದೆ ನಾನು ಬಿಜೆಪಿಯಲ್ಲಿದ್ದ ಕಾರಣಕ್ಕೆ ಆಗ ಕಾಂಗ್ರೆಸ್‌ನಲ್ಲಿದ್ದ ಶಾಸಕ ಮುನಿರತ್ನ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಕಳುಹಿಸಿದ್ದರು. ವೇಶ್ಯಾವಾಟಿಕೆ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳಿಸಿದ್ದರು. ಬಳಿಕ ಜಾಮೀನು ಪಡೆದು ಹೊರಗೆ ಬಂದಿದ್ದೆ. ಈ ನಡುವೆ ಅವರೂ ಕೂಡ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಇದಾದ ಬಳಿಕ ಕೆಲವರು ನನ್ನ ಕೇಸ್ ಇತ್ಯರ್ಥ ಮಾಡಿಕೊಡುವುದಾಗಿ ಆಮಿಷವೊಡ್ಡಿದ ಅವರ ಆಪ್ತರು 2023ರ ಜೂನ್ 11ರಂದು ಜೆ.ಪಿ ಪಾರ್ಕ್ ಬಳಿಯಿರುವ ಶಾಸಕರ ಕಚೇರಿಯ ಎರಡನೇ ಮಹಡಿಗೆ ಕರೆದೊಯ್ದರು. ಅಲ್ಲಿ ನನ್ನನ್ನು ಬೆತ್ತಲೆಗೊಳಿಸಿ, ತನ್ನ ಇಬ್ಬರು ಸಹಚರರಿಂದ ಸಾಮೂಹಿಕ ದೌರ್ಜನ್ಯಕ್ಕೆ ಕಾರಣರಾಗಿದ್ದರು. ಜತೆಗೆ, ಅಪಾಯಕಾರಿ ಕಾಯಿಲೆ ಬರುವಂತಹ ಇಂಜೆಕ್ಷನ್ ನೀಡಿದ್ದರು. ಈ ವಿಚಾರ ಎಲ್ಲಿಯೂ ಬಾಯಿ ಬಿಡದಂತೆ ಮುನಿರತ್ನ ಬೆದರಿಕೆ ಹಾಕಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜಿಸಿದ್ದರು ಎಂದು ಮಹಿಳೆ ಆರೋಪಿಸಿದ್ದರು.
ಇದರಿಂದ ಮನನೊಂದ ನಾನು ಆತಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376ಆ, 270, 323, 354, 504, 506, 509, 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಈ ಬಗ್ಗೆ ರಚಿಸಿತ್ತು.



