ಬೆಂಗಳೂರು: ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸೌಧ ಕೆಂಗಲ್ ಪ್ರತಿಮೆ ಮುಂಭಾಗದಿಂದ ದ್ವಿಚಕ್ರ ಮತ್ತು ನಾಲ್ಕು ಚಕ್ರ ಕಾರಿನ ಮೂಲಕ ಜಾಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡ ಜಾಥಾಕ್ಕೆ ಚಾಲನೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಾಥಾ ಕೆಂಗಲ್ ಗೇಟ್ ವಿಧಾನಸೌಧದಿಂದ ಚಾಲುಕ್ಯ ಸರ್ಕಲ್, ಸ್ಯಾಂಕಿ ರಸ್ತೆ, ಮೇಖ್ರಿ ಸರ್ಕಲ್, ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ, ಕೆ.ಆರ್.ಸರ್ಕಲ್ ಮಾರ್ಗವಾಗಿ ನೃಪತುಂಗ ರಸ್ತೆ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು. ಜಾಥಾ 15 ಕಿಲೋಮೀಟರ್ ಸಾಗಿತು.

ಇದೇ ಸಂದರ್ಭದಲ್ಲಿ ಹೆಚ್.ಎಸ್.ಮಂಜುನಾಥಗೌಡ ಮಾತನಾಡಿ, ಕಾಂಗ್ರೆಸ್ ಮಹಿಳೆಯ ಪರ ಮತ್ತು ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಇಂದಿರಾಗಾಂಧಿರವರು 16 ವರ್ಷ ಪ್ರಧಾನಿಯಾಗಿ ಆಡಳಿತ ಮತ್ತು ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷ ಅಧ್ಯಕ್ಷ ಸ್ಥಾನ ಅಲಂಕರಿಸಿ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು.

ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶ ಕೊಟ್ಟ ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆ ಲಾಭವನ್ನು ಮಹಿಳೆಯರೇ ಪಡೆದಿರುವುದು ಸಂತೋಷಕರ ವಿಷಯವಾಗಿದೆ. ಶಕ್ತಿ ಯೋಜನೆ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಮನೆಯ ಯಾಜಮಾನಿಗೆ 2000, ಅನ್ನಭಾಗ್ಯ ಯೋಜನೆಗಳು ಮಹಿಳೆಯರು ಸ್ವಾಭಿಯಾನಿಯಾಗಿ ಬದುಕಲು ಸಹಕಾರಿಯಾಗಿದೆ ಎಂದರು.

5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯರವರಿಗೆ ಹೃತ್ಪೂರ್ವಕ ಧನ್ಯವಾದಗಳು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಸಮೂಹದ ಪಾತ್ರ ಡೊಡ್ಡದು. ಯುವ ಸಂಘಟನೆ ಮೂಲಕ 28 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವಂತೆ ಸಂಘಟನೆ ಮಾಡಲಾಗುವುದು ಎಂದರು.




