ಬೆಂಗಳೂರು: ರಾಜ್ಯ ಸರ್ಕಾರದ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಅನುಮೋದನೆ ಕೋರಿ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಮಸೂದೆ ಮಂಡಿಸಿ ಮಾತನಾಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್, ನಿರುದ್ಯೋಗ ಸಮಸ್ಯೆ ನಿವಾರಣೆ ದೃಷ್ಟಿಯಿಂದ ಕರ್ನಾಟಕ ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಇದರಿಂದ ಯುವ ಜನತೆ ಸ್ವ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿಗಳಾಗಲು ಅವಕಾಶ ಕಲ್ಪಿಸಿ ಕೊಡಲಿದೆ ಎಂದರು.
2025-26ನೇ ಸಾಲಿನ ಆಯವ್ಯಯದ ಭಾಷಣದಲ್ಲಿ ಪ್ರಸ್ತಾವಿಸಲಾದ ಭರವಸೆಯಂತೆ ನಿರುದ್ಯೋಗ ಸಮಸ್ಯೆ ನಿವಾರಿಸಲು ಈ ವಿಧೇಯಕ ರೂಪಿಸಿರುವುದಾಗಿ ತಿಳಿಸಲಾಗಿದೆ. ಸರ್ಕಾರಿ ನಿರ್ಮಾಣ ಕಾಮಗಾರಿಗಳ ಪೈಕಿ ಶೇ.4 ರಷ್ಟನ್ನು ಮೀರದಂತೆ ಹಿಂದುಳಿದವರ ಪ್ರವರ್ಗ 2 ಬಿ ಗೆ ಸೇರಿದ ವ್ಯಕ್ತಿಗಳಿಗೆ ಪಾಲ್ಗೊಳ್ಳಲು ಪ್ರೋತ್ಸಾಹಿಸುವ ಉದ್ದೇಶವನ್ನು ವಿಧೇಯಕ ಹೊಂದಿದೆ.
ಅಧಿಸೂಚನಾ ಇಲಾಖೆಗಳಲ್ಲಿ ನಿರ್ಮಾಣ ಕಾಮಗಾರಿಗಳ ಹೊರತಾಗಿ ಸರಕು ಮತ್ತು ಸೇವೆಗಳ ಸಂಗ್ರಹಣೆಯಲ್ಲಿ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಹಾಗೂ ಹಿಂದುಳಿದ ವರ್ಗಗಳಲ್ಲಿ ಶೇ.1 ಕೋಟಿ ರೂ.ವರೆಗೂ ಸರಕು – ಸೇವೆಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿಗಳಿಗೆ ಶೇ.17.15 ರಷ್ಟು, ಪರಿಶಿಷ್ಟ ಪಂಗಡಗಳಿಗೆ ಶೇ.6.95 ರಷ್ಟು, ಪ್ರವರ್ಗ 2 ಎ ಗೆ ಶೇ.15 ರಷ್ಟು, ಪ್ರವರ್ಗ 2 ಬಿ ಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
ಸರ್ಕಾರಿ ನಿರ್ಮಾಣ ಕಾಮಗಾರಿಗಳಲ್ಲಿ 1 ಕೋಟಿ ರೂ.ಗಳ ಮೀಸಲಾತಿಯನ್ನು 2 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಇದರಲ್ಲಿ ಈವರೆಗೂ ಎಸ್‌ಸಿ/ಎಸ್‌ಟಿಗಳಿಗೆ ಮಾತ್ರ ಮೀಸಲಾತಿ ಇದ್ದು ಈಗ ಪ್ರವರ್ಗ 2 ಬಿ ಅಡಿಯಲ್ಲಿ ಬರುವ ಮುಸ್ಲಿಮರಿಗೂ ಅವಕಾಶ ಕಲ್ಪಿಸಲಾಗಿದೆ.
ನಿರ್ದಿಷ್ಟ ಸಮುದಾಯದ ವ್ಯಕ್ತಿಗಳಿಂದ ಟೆಂಡರ್ ಸ್ವೀಕರಿಸದಿದ್ದಲ್ಲಿ ಅಂತಹ ಸರಕು ಮತ್ತು ಸೇವೆಗಳ ಸಂಗ್ರಹಣೆಯ ಆಹ್ವಾನಗಳಿಗೆ ಪ್ರತಿಕ್ರಿಯಿಸಿದ ಇತರ ಟೆಂಡರ್‌ದಾರರಿಗೆ ಅವಕಾಶ ನೀಡಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.




