ಬೆಂಗಳೂರು: ಬಳ್ಳಾರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಗುಂಡೇಟಿನಿಂದ ಮೃತ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಬಲಿಯಾದ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಲಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ.
ತಮ್ಮ ಹೇಳಿಕೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ನೀಡಿರುವ ಪ್ರತಿಕ್ರಿಯೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ನಾನು ಹೇಳಿದ್ದು ಅಕ್ಷರಶಃ ನಿಜ ಎಂದಿದ್ದಾರೆ.
ಡಬಲ್ ಪೋಸ್ಟ್ ಮಾರ್ಟಂ ಅಸತ್ಯವಾದರೆ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ. ಆಗ ನಿಮ್ಮ ಪೋಸ್ಟ್ ಮಾರ್ಟಂ ಮಾಯಾಜಾಲ ಬಯಲಾಗುತ್ತದೆ.ಈ ಪ್ರಕರಣ ಮುಚ್ಚಿಹಾಕಲು ನಿಮ್ಮ ಸರಕಾರ ನಡೆಸುತ್ತಿರುವ ಮಹಾನ್ ಹರಸಾಹಸ ಏನೇನ್ ಎಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಬಿಮ್ಸ್ ಅಧಿಕ್ಷಕರು ಬೆಳಿಗ್ಗೆ 6 ಗಂಟೆಯಿಂದ ಶುರುವಾದ ಪೋಸ್ಟ್ ಮಾರ್ಟಂ 3 ಗಂಟೆಗಳ ಕಾಲ ನಡೆದು ವಿಳಂಬವಾಯಿತು. ದೇಹದಲ್ಲಿ ಅನೇಕ ಚೂರುಗಳು ಇದ್ದವು ಎಂದು ಹೇಳಿದ್ದಾರೆ. ಆದರೆ, ಆ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಹಾಗಿದ್ದ ಮೇಲೆ ಇನ್ನೊಬ್ಬ ವೈದ್ಯರನ್ನು ಕರೆಸಿಕೊಂಡ ಗುಟ್ಟೇನು? ಮೃತದೇಹ ಪರೀಕ್ಷೆಗೆ ಎಷ್ಟು ವೈದ್ಯರು ಬೇಕು, ಮರಣೋತ್ತರ ಪರೀಕ್ಷೆ ವೇಳೆ ನೀವು ಜೀವ ಉಳಿಸಬೇಕಿತ್ತಾ ಎಂದು ಪ್ರಶ್ನಿಸಿರುವ ಅವರು ಸತ್ಯ ಹುಡುಕಬೇಕಿದ್ದರೆ ಪೊರೆನ್ಸಿಕ್ ತಜ್ಞರನ್ನು ಕರೆಸಿ ಬೇಕಲ್ಲವೆ ಎಂದಿದ್ದಾರೆ.
ಪೋಸ್ಟ್ ಮಾರ್ಟಂ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವುದು ಕೂಡ ನನಗೆ ಗೊತ್ತಿದೆ.ಸಮಾಜವನ್ನು ಹಾಳು ಮಾಡಲಿಕ್ಕೊ ಅಥವಾ ನಿಮ್ಮ ತನಿಖೆ ದಿಕ್ಕು ತಪ್ಪಿಸಲಿಕ್ಕೊ, ಮಾಹಿತಿ ಇಲ್ಲದೆಯೋ ನಾನು ಹೇಳಿದ್ದಲ್ಲ. ಮೃತದೇಹವನ್ನೂ ನಿಮ್ಮ ಮನೆಹಾಳು ರಾಜಕೀಯಕ್ಕೆ ಬಳಸಿಕೊಂಡಿದ್ದನ್ನು ರಾಜ್ಯದ ಜನತೆಗೆ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ.



