ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್ ನಲ್ಲಿ ಮಾಜಿ ಶಿಕ್ಷಣ ಸಚಿವರು, ಶಾಸಕ ಎಸ್.ಸುರೇಶ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕರುಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಹಿ ವಿತರಣೆ ಹಾಗೂ ಬಂಡಿರೆಡ್ಡಿ ಸರ್ಕಲ್ ನಲ್ಲಿ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಸಾವಿತ್ರಿ ಎಸ್.ಸುರೇಶ್ ಕುಮಾರ್, ಮಾಜಿ ಬಿಬಿಎಂಪಿ ಸದಸ್ಯ ಎಂ.ಮುನಿರಾಜು, ಶಕೀಲ ಮುನಿರಾಜುರವರು, ಮಂಡಲ ಅಧ್ಯಕ್ಷರಾದ ಸುದರ್ಶನ್, ರಾಜಾಜಿನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸಂಜಯ್ ಕುಮಾರ್ ರವರು ಹುಟ್ಟುಹಬ್ಬದ ಅಚರಣೆಯಲ್ಲಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ನೆರೆದ ಗಣ್ಯರು ಸುರೇಶ್ ಕುಮಾರ್ ಅವರು ನಡೆದು ಬಂದ ದಾರಿ ಮೆಲುಕು ಹಾಕಿದರು. ಆರ್.ಎಸ್.ಎಸ್.ಸಕ್ರಿಯ ಕಾರ್ಯಕರ್ತರಾಗಿ ಸೇವೆ, 1977ರಲ್ಲಿ ತುರ್ತು ಪರಿಸ್ಥಿತಿಯಲ್ಲಿ ಜೈಲುವಾಸ ಅನುಭವಿಸಿದ್ದರು. ನಂತರ ಪಾಲಿಕೆ ಸದಸ್ಯರಾಗಿ ಸೇವೆ ಸಲ್ಲಿಸಿದರು ಎಂದರು.
6 ಬಾರಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆ ಹಾಗೂ ಬಿಜೆಪಿ ಸರ್ಕಾರದಲ್ಲಿ ಕಾನೂನು, ಶಿಕ್ಷಣ ಜಲಮಂಡಳಿ ಸಚಿವರಾಗಿ ಉತ್ತಮ ಸೇವೆ.
ಬಿ.ಆರ್.ಅಂಬೇಡ್ಕರ್ ಡೇ ಕೇರ್ ಸೆಂಟರ್, ಪಂಡಿತ್ ದೀನದಯಾಳ್ ಉಪಾಧ್ಯಾಯ ಡಯಾಲಿಸಿಸ್ ಸೆಂಟರ್, ಇಂದಿರಾನಗರ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ, ಆಲದಮರ ಉದ್ಯಾನವನ ಅಭಿವೃದ್ಧಿ, ಶ್ರೀ ರಾಮಮಂದಿರ ಆಟದ ಮೈದಾನ ನವೀಕರಣ, ಉತ್ತಮ ರಸ್ತೆ ಮತ್ತು ಕುಡಿಯುವ ನೀರಿನ ಘಟಕಗಳು, ಮಾದರಿ ಪುಟ್ ಪಾತ್ , ಎಲ್ಲ ವಾರ್ಡ್ ಗಳಲ್ಲಿ ವಾರ್ಡ್ ಕಛೇರಿಗಳನ್ನು ನಿರ್ಮಾಣ ಮಾಡಿಸಿದ್ದಾರೆ ಎಂದು ತಿಳಿಸಿದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಾದರಿ ವಿಧಾನಸಭಾ ಕ್ಷೇತ್ರ ಎಂಬ ಕೀರ್ತಿ ಪಾತ್ರವಾಗಿದೆ, ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಎಸ್.ಸುರೇಶ್ ಕುಮಾರ್ ರವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.




