ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಯಾವುದೇ ಪ್ರಯತ್ನ ನಡೆಸುವುದಿಲ್ಲ. ಒಂದು ವೇಳೆ ಆಂತರಿಕ ಕಲಹದಿಂದ ಈ ಸರ್ಕಾರ ಪತನ ಹೊಂದಿದರೆ ನಾವು ಜವಾಬ್ದಾರರಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಷಿ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೇಶನ ಹಂಚಿಕೆ ಅಕ್ರಮದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ತಳಮಳ ಆರಂಭವಾಗಿದೆ. ಬಹುತೇಕ ಶಾಸಕರು ಮುಖ್ಯಮಂತ್ರಿ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುವ ಹವಣಿಕೆಯಲ್ಲಿದ್ದಾರೆ ಎಂದರು.
ರಾಜ್ಯದ ಜನತೆ ಕಾಂಗ್ರೆಸ್ ಗೆ ಐದು ವರ್ಷ ಆಡಳಿತ ನಡೆಸಲು 136 ಸ್ಥಾನಗಳನ್ನು ನೀಡಿದ್ದಾರೆ. ಬಹುಮತ ಹೊಂದಿರುವ ಸರ್ಕಾರವನ್ನು ಅಭದ್ರಗೊಳಿಸುವುದು ಅಷ್ಟು ಸುಲಭದ ಮಾತಲ್ಲ ಎಂದರು.
ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಯಾರೂ ಕೂಡ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕಿಲ್ಲ ಎಂದರು.
ಆದರೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಯಾವಾಗ ಏನು ಬೇಕಾದರೂ ಆಗಬಹುದು ಅದಕ್ಕೆ ನಾವು ಜವಾಬ್ದಾರರಲ್ಲ ಎಂದರು.
ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿಕೊಳ್ಳಲು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ವಾಸ್ತವವಾಗಿ ಕುರ್ಚಿ ಕಳೆದುಕೊಳ್ಳುವ ಭೀತಿ ಸಿಎಂಗೆ ಎದುರಾಗಿದೆ. ಹೀಗಾಗಿ ತಮಗೆ ಬೆಂಬಲ ನೀಡಬೇಕೆಂದು ಶಾಸಕರಿಗೆ ಬಲವಂತವಾಗಿ ಒತ್ತಡ ಹಾಕುತ್ತಿದ್ದಾರೆ. ಇದು ವಾಸ್ತವವೂ ಹೌದು ಎಂದರು.
ನಿಮ್ಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಬಿಜೆಪಿ ಯಾವ ಕಾರಣಕ್ಕೂ ಈ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ. ಸಿಎಂ ಮೇಲೆ ಆರೋಪ ಬಂದಿದೆ. ಅವರು ಶುದ್ಧರಾಗಿ ಹೊರಗೆ ಬರಲಿ. ಪಾರದರ್ಶಕ ತನಿಖೆ ನಡೆಯಲಿ ಎಂದರು.




