ಹಣ ಪಾವತಿಸದಂತೆ ಚುನಾವಣೆ ಆಯೋಗಕ್ಕೆ ಬಿಜೆಪಿ ಮನವಿ

2 years ago

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರುವ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿ.ಡಿ.ಎ) ಶಿವರಾಮ ಕಾರಂತ ಬಡಾವಣೆ ಮೂಲ ಸೌಕರ್ಯ ಕಲ್ಪಿಸಲು ನಾಡಪ್ರಭು ಕೆಂಪೇಗೌಡ ಬಡಾವಣೆಯ 2500 ಮೂಲೆ ನಿವೇಶನಗಳನ್ನು ಬ್ಯಾಂಕಿನಲ್ಲಿ ಅಡಮಾನವಿಟ್ಟು 1000ದಿಂದ 2000 ಕೋಟಿ ರೂಪಾಯಿಗಳ ಮೊತ್ತವನ್ನು ಬ್ಯಾಂಕ್ ನಿಂದ ಸಾಲ ಪಡೆಯುತ್ತಿದೆ. ಇಷ್ಟೊಂದು ಭಾರಿ ಪ್ರಮಾಣದ ಮೊತ್ತ ಹಣವನ್ನು ಚುನಾವಣಾ ಸಮಯದಲ್ಲಿ ತೆಗೆದುಕೊಳ್ಳುವ ಅವಶ್ಯಕತೆ ಇದೆಯೇ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನಿಸಿದರು.

ಮಲ್ಲೇಶ್ವರಂ ಜಿ.ಎಂ.ರೀಜಾಯ್ಸ್ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೂಲಸೌಕರ್ಯ ಕಾಮಗಾರಿಗಳನ್ನು ಮುಂದುವರೆಸಲು ಗುತ್ತಿಗೆದಾರರಿಗೆ ಪಾವತಿಸುವ ನೆಪವನ್ನು ಒಡ್ಡಿ ಚುನಾವಣಾ ಕಾರ್ಯಕ್ಕೆ ಉಪಯೋಗಿಸಿಕೊಳ್ಳಲು ವ್ಯವಸ್ಥಿತವಾಗಿ ಅಡ್ಡದಾರಿಗಳಿಂದ ಹಣ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆ ಮುಹಿಯುವವರೆಗೆ ಯಾವುದೇ ರೀತಿಯ ಪಾವತಿಗಳನ್ನು ಮಾಡದಂತೆ ಬಿ.ಡಿ.ಎ. ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಅವರು, ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಪಕ್ಷದ ಬಾವುಟ, ಚಿಹ್ನೆಗಳನ್ನು ಮನೆ ಮೇಲೆ ಹಾಕಬಹುದು ಮತ್ತು ವಾಹನಗಳ ಮೇಲೆ ಬಳಸಬಹುದು. ಇದರ ಕುರಿತು ಸ್ಪಷ್ಟ ಆದೇಶವಿದೆ. ಅದರ ಕಾಪಿಯನ್ನು ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ಕಾನೂನು ಪ್ರಕೋಷ್ಟದಿಂದ ನೀಡಲಾಗುವುದು. ಚುನಾವಣೆ ನಿರತ ಸಿಬ್ಬಂದಿ ಬಂದಾಗ ಆದೇಶ ಕಾಪಿ ತೋರಿಸಿ ಎಂದರು.
ಈ ವೇಳೆ, ಕುಮಾರ್ ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ಬಿಜೆಪಿ ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ದತ್ತಗುರು ಹೆಗ್ಡೆ, ವಿನೋದ್ ಕುಮಾರ್ ಮೊದಲಾದವರು ಹಾಜರಿದ್ದರು.

Leave a Reply