ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪರಿಶಿಷ್ಟ ಸಮುದಾಯಕ್ಕೆ ಸೇರಿದ ರಾಜ್ಯಪಾಲರನ್ನು ಕಾಂಗ್ರೆಸ್ ಕಾರ್ಯಕರ್ತರು ಅವಹೇಳನ ಮಾಡುವ ಮೂಲಕ ದಲಿತ ವಿರೋಧಿ ಧೋರಣೆ ತೋರಿಸುತ್ತಿದ್ದು, ಇತರ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದೆ.
ಪ್ರತಿಭಟನೆಯ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಬೇಕು ಎಂದು ಬಿಜೆಪಿಯ ಎಲ್ಲಾ ಮೋರ್ಚಾಗಳಿಗೆ ಕರೆ ನೀಡಲಾಗಿದೆ.
ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ತಮ್ಮಲ್ಲಿರುವ ಆಂತರಿಕವಾಗಿ ಸಮಸ್ಯೆಯನ್ನು ಸರಿ ಮಾಡಿಕೊಳ್ಳಲು ಬಿಜೆಪಿಯವರು ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ.
ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ. ಬೇಡ ಎಂದು ಹೇಳಿದವರು ಯಾರು ಎಂದರು.




