ಬೆಂಗಳೂರು: ರಾಜ್ಯ ಸರ್ಕಾರ ದುರುದ್ದೇಶಪೂರ್ವಕವಾಗಿ ಸಿದ್ಧಪಡಿಸಿರುವ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಲು ಮುಂದಾದ ರಾಜ್ಯಪಾಲರನ್ನು ಅಡ್ಡಗಟ್ಟುವ ಮೂಲಕ ಕಾಂಗ್ರೆಸ್ಸಿನ ಕೆಲವು ಶಾಸಕರು ಗೂಂಡಾ ಗಿರಿ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಇದು ರಾಜ್ಯದ ಪಾಲಿಗೆ ಅತ್ಯಂತ ಕರಾಳ ದಿನ ಎಂದು ಬಣ್ಣಿಸಿದೆ.
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
- ರಾಹುಲ್ ಗಾಂಧಿ ಅವರು ತಕ್ಷಣವೇ ನಾಡಿನ ಜನತೆಯ ಕ್ಷಮೆಯಾಚಿಸಬೇಕು!: ಆರ್ ಅಶೋಕ್
- ಬೆಂಗಳೂರು ಪೇಟೆಯ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ: ಕೃಷ್ಣ ಬೈರೇಗೌಡ
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲರನ್ನು ಕಾಂಗ್ರೆಸ್ ಸದಸ್ಯರು ಅಡ್ಡಗಟ್ಟಿರುವುದು ಖಂಡನೀಯ. ಇದೊಂದು ಕರಾಳ ದಿನ ಎಂದರು.
ಸಂವಿಧಾನದ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಿಸಿ ಎಲ್ಲರಿಗೂ ಧನ್ಯವಾದ ಹೇಳಿ ಹೊರಟಿದ್ದಾರೆ. ಇದರಲ್ಲಿ ತಪ್ಪೇನಿದೆ. ರಾಜ್ಯಪಾಲರಿಗೆ ಭಾಷಣವನ್ನು ಓದದೆ ಸದನದಿಂದ ನಿರ್ಗಮಿಸುವ ಅಧಿಕಾರ ಇದೆ ಎಂದರು.
ಕಾಂಗ್ರೆಸ್‌ನವರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿದ್ದು ಗುಂಡಾಗಿರಿ ಸದನದಿಂದ ಹೊರ ಹೋಗುತ್ತಿದ್ದ ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿದ ಸದಸ್ಯರನ್ನು ಸದನದಿಂದ ಹೊರ ಹಾಕಿ ಎಂದು ಆಗ್ರಹಿಸಿದ ಅವರು,ಈ ಸಂಬಂಧ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ನೀಡುತ್ತೇವೆ ಎಂದರು.
ರಾಜ್ಯಪಾಲರನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಡೆಯನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜ್ಯಪಾಲರು ಸರ್ಕಾರದ ಹಲವು ಮಸೂದೆಗಳಿಗೆ ಸಹಿ ಹಾಕಿದ್ದಾರೆ. ಆಗ ರಾಜ್ಯಪಾಲರು ಸರಿ ಇದ್ದರಾ ಎಂದು ಪ್ರಶ್ನಿಸಿದರು.
ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಬಳಸಿರುವುದು ಸಂಪೂರ್ಣವಾಗಿ ಸಂವಿಧಾನ ಸಮ್ಮತ ಇದನ್ನು ಪ್ರಶ್ನಿಸುವ ಕಾಂಗ್ರೆಸ್ ಸರ್ಕಾರ ಮೊದಲು ಸಂವಿಧಾನ ಓದಲಿ, ಅರ್ಥಮಾಡಿಕೊಳ್ಳಲಿ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಸುಧಾರಣೆಗಳನ್ನು ತಂದಿದೆ. ಆದರೆ ಕಾಂಗ್ರೆಸ್ ಈ ಬಗ್ಗೆ ಅಪಪ್ರಚಾರ ನಡೆಸುತ್ತಿದೆ. ವಿಧಾನಸಭೆಯಲ್ಲಿ ೧೪೦ ಶಾಸಕರ ಬೆಂಬಲ ಇದೆ ಎಂದು ದರ್ಪದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸದನದ ಒಳಗಡೆ ರಾಜ್ಯಪಾಲರಿಗೆ ಅಗೌರವ ಸೂಚಿಸುವ ಕೆಲಸವನ್ನು ಆಡಳಿತ ಪಕ್ಷದವರು ಮಾಡಿದ್ದು, ಖಂಡನಾರ್ಹ.ಕಾಂಗ್ರೆಸ್ ಸರ್ಕಾರ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ದಾರಿಯಲ್ಲಿ ಸಾಗುತ್ತಿದೆ. ಸದನದ ದುರ್ಬಳಕೆಯನ್ನು ಮಾಡಲು ಹೊರಟಿರುವುದು ದುರ್ದೈವ ಎಂದರು.
ರಾಜ್ಯದ ಜನರು ಎಲ್ಲವನ್ನು ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ನಡವಳಿಕೆ ಸರಿಮಾಡಿಕೊಳ್ಳದೆ ಹೋದರೆ ಜನ ಪಾಠಕಲಿಸುತ್ತಾರೆ. ಇದನ್ನು ಅರ್ಥ ಮಾಡಿಕೊಂಡು ಕಾಂಗ್ರೆಸ್ ಸರ್ಕಾರವು ಸರಿಯಾದ ದಾರಿಯಲ್ಲಿ ಹೋಗಬೇಕು. ಪ್ರಜಾಪ್ರಭುತ್ವ ಸಂವಿಧಾನ ಗೌರವ ಉಳಿಸಬೇಕು ಎಂದರು.




