ಕೊಲ್ಕೊತ್ತಾ: ಬಿಜೆಪಿ ನಾಯಕರ ಎಡವಟ್ಟುಗಳು ಒಂದೆರೆಡಲ್ಲ. ಇದೇ ಮಾದರಿಯಲ್ಲಿ ಲೋಕಸಭಾ ಚುನಾವಣೆಗೆ ಮತಯಾಚನೆ ಮಾಡುವ ವೇಳೆ ಮತ್ತೊಂದು ಎಡವಟ್ಟು ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಮಾಲ್ಡಾ ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ 2ನೇ ಬಾರಿ ಬಿಜೆಪಿಯಿಂದ ಅದೃಷ್ಟ ಪರೀಕ್ಷೆಗೆ ಇಳಿದಿರುವ ಬಿಜೆಪಿ ಸಂಸದ ಖಗೇನ್ ಮುರ್ಮು ಮಹಿಳೆಯೊಬ್ಬರ ಕೆನ್ನೆಗೆ ಮುತ್ತಿಟ್ಟು ಮತಭಿಕ್ಷೆ ಬೇಡಿದ್ದಾರೆ. ಚಂಚಲ್ ನ ಸಿಹಿಪುರ್ ಗ್ರಾಮದಲ್ಲಿ ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದ ಖಗೇನ್ ಮುರ್ಮು, ಮಹಿಳೆಯೊಬ್ಬರ ಕೆನ್ನೆಗೆ ಕಿಸ್ ಮಾಡಿದ್ದಾರೆ.
ಇದೀಗ ಈ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಎಮ್ಸಿ ನಾಯಕರು ಮತ್ತು ಇತರರು ಖಗೇನ್ ಮುರ್ಮು ನಡೆಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಗಿಂಕ ಕಿರುಕುಳ ನೀಡುವ ಸಂಸದರಿಂದ ಹಿಡಿದು ಬಂಗಾಳಿ ಮಹಿಳೆಯರ ಬಗ್ಗೆ ಅಶ್ಲೀಲ ಹಾಡುಗಳನ್ನು ಹಾಡುವ ನಾಯಕವರೆಗೆ ಬಿಜೆಪಿಯಲ್ಲಿ ಮಹಿಳಾ ವಿರೋಧಿ ರಾಜಕಾರಣಿಗಳೇನು ಕೊರತೆಯಿಲ್ಲ. ನಾರಿ ಕಾ ಸಮ್ಮಾನ್ನಲ್ಲಿ ಮೋದಿ ಕಾ ಪರಿವಾರ್ ತೊಡಗಿಸಿಕೊಂಡಿರೋದು ಹೀಗೆ ಎಂದು ಟಿಎಂಸಿ ನಾಯಕರು ಕಿಡಿಕಾರಿದ್ದಾರೆ.




