ಮೈಸೂರು: ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಸ್ಟ್ ಕುರಿತು ಯೋಗೇಶ್ ಮಾಸ್ಟರ್ ಸ್ಪಷ್ಟೀಕರಣ
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದರು.
ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದರು.
ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳನ್ನು ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂದರು.




