ಮೈಸೂರು: ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮಯಾತ್ರೆಯ ಹೊಸ ತಂತ್ರ ಹೆಣೆಯುತ್ತಿದ್ದಾರೆ. ಅವರು ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ. ಯಾತ್ರೆ ಹೋದರೆ ಹೋಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಐ.ಟಿ ರಚನೆಯನ್ನು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ ಎಂದರು.
ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ ಎಂದರು.
ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್‌ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದವು. ಬಿಜೆಪಿಯವರು ಕೂಡ ಇದನ್ನು ಸ್ವಾಗತಿಸಿದ್ದರು. ಈಗ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮದ ವ್ಯಾಖ್ಯಾನವೇ ಗೊತ್ತಿಲ್ಲ ಎಂದರು.
ಧರ್ಮಸ್ಥಳದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕಾದ ಅಗತ್ಯ ಎಲ್ಲಿದೆ? ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನು ಸಿಬಿಐ ಗೆ ಕೊಟ್ಟಿದ್ದಾರೆ? ಎಸ್.ಐ.ಟಿ ಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಸದ್ಯ ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದರು.




