ರೇಣುಕಾಚಾರ್ಯಗೆ ನೊಟೀಸ್ ನೀಡಿದ ಬಿಜೆಪಿ

3 years ago

ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಬಿಜೆಪಿ ನಾಯಕತ್ವ ಶಿಸ್ತು ಕ್ರಮಕ್ಕೆ ಮುಂದಾಗಿದೆ.

ವಿಧಾನಸಭೆ ಚುನಾವಣೆ ಸೋಲು ಸೇರಿದಂತೆ ಹಲವು ವಿಷಯಗಳ ಕುರಿತಾಗಿ, ಪಕ್ಷದ ನಾಯಕರ ವಿರುದ್ಧ  ನೀಡಿದ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ಪಕ್ಷವು ಸಾಕಷ್ಟು ಬಾರಿ ತಿಳಿ ಹೇಳಿದರೂ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಮಾಧ್ಯಮಗಳ ಎದುರು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ತಮ್ಮ ಮೇಲೆ ಏಕೆ ಶಿಸ್ತು ಕ್ರಮ ಜರುಗಿಸಬಾರದು? ಈ ನೋಟಿಸ್ ತಲುಪಿದ ಒಂದು ವಾರದೊಳಗೆ ಲಿಖಿತ ರೂಪದಲ್ಲಿ ಉತ್ತರ ನೀಡಬೇಕು ಎಂದು ಸೂಚಿಸಿದ್ದಾರೆ.

ರೇಣುಕಾಚಾರ್ಯ ಇತ್ತೀಚೆಗೆ ಬಿಜೆಪಿ ಸೋಲಿಗೆ ಕಾರಣರಾದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ‌ನೀಡಬೇಕು. ಚುನಾವಣೆಯಲ್ಲಿ ಕೇವಲ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಷ್ಟೇ ಇವರ ಕೆಲಸ ಸಂಘಟನೆ ಹಾಗೂ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಲು ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ಆಪಾದಿಸಿದ್ದರು.

Leave a Reply