ಮೈಸೂರು: ಕರ್ನಾಟಕದಲ್ಲಿ 2018ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ? ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಪ್ರಶ್ನಿಸಿದರು.
ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸೋಲುವ ಭಯದಿಂದ ಸಿಎಂ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವ ಬಗ್ಗೆ ಮಾತನಾಡಿ, ನಾನು ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 74ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ಒಟ್ಟಿಗೆ ರಾಜಕಾರಣದಲ್ಲಿದ್ದೆವು. ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದರು.




