ಬಿಜೆಪಿಯವರಿಗೆ ಈ ದೇಶದ ಸಂವಿಧಾನ, ಕಾನೂನಿನ ಮೇಲೆ ನಂಬಿಕೆಯಿಲ್ಲ. ಸುಪ್ರೀಂ ಕೋರ್ಟ್ ಮೇಲೂ ಗೌರವವಿಲ್ಲ ಎಂಬುದು ಆರ್. ಅಶೋಕ್ ಅವರ ಹೇಳಿಕೆಯಿಂದ ಮತ್ತೊಮ್ಮೆ ಸಾಬೀತಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ. 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, 52 ಆರೋಪಿಗಳನ್ನು ಬಂಧಿಸಿದ್ದಾರೆ.
ಆದರೆ R Ashoka ಅವರಿಗೆ ಉತ್ತರ ಪ್ರದೇಶದಂತೆ ಬುಲ್ಡೋಜರ್ ನ್ಯಾಯ ಬೇಕಾಗಿದೆ. ಸ್ವತಃ ಸುಪ್ರೀಂ ಕೋರ್ಟ್ ಬುಲ್ಡೋಜರ್ ಕಾರ್ಯಾಚರಣೆ ತಪ್ಪು, ಇದು ದೇಶದ ಕಾನೂನು ಧ್ವಂಸಕ್ಕೆ ಸಮ ಎಂದು ಹೇಳಿದೆ. ದೇಶದ ಕಾನೂನಿನ ಮೇಲೆ ಗೌರವ ಇಲ್ಲದ ಆರ್. ಆಶೋಕ್ ಹೇಳಿಕೆ ನ್ಯಾಯಾಂಗ ನಿಂದನೆಯಷ್ಟೇ ಅಲ್ಲ ರಾಜ್ಯದಲ್ಲಿ ಕೋಮುದ್ವೇಷ ಹರಡುವ ಉದ್ದೇಶ ಹೊಂದಿದೆ.
ಈ ಪ್ರಕರಣದಲ್ಲಿ ಅಪರಾಧಿಗಳು ಯಾರೇ ಇದ್ದರೂ ಪೊಲೀಸರು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ಶಿಕ್ಷೆಗೆ ಗುರಿಪಡಿಸಲಿದ್ದಾರೆ. ಶಾಂತಿಯುತವಾಗಿದ್ದ ಮಂಡ್ಯದಲ್ಲಿ ಕೋಮುದ್ವೇಷ ಹರಡಿ ಈ ರೀತಿಯ ಘಟನೆ ನಡೆಯಲು ಬಿಜೆಪಿಯೇ ಕಾರಣ. ಇನ್ನಾದರೂ ಇಂತಹ ಸೂಕ್ಷ್ಮ ವಿಚಾರದಲ್ಲಿ ಬಿಜೆಪಿ ನಾಯಕರು ಜವಾಬ್ದಾರಿಯಿಂದ ವರ್ತಿಸಲಿ.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ




