ಚಿಕ್ಕಬಳ್ಳಾಪುರ: ಬಿಜೆಪಿಯವರು ನಮ್ಮ ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. ₹2,000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳಿದ್ದೆವು, ಅದರಂತೆ ನಡೆದಿದ್ದೇವೆ ಎಂದರು.
ಸರ್ಕಾರದಲ್ಲಿ ಯಾವುದೇ ಬದಲಾವಣೆ ಮಾಡುವ ಸಂಬಂಧ ನಮ್ಮಲ್ಲಿ ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು ಎಂದರು.
ಹೈಕಮಾಂಡ್ ಅನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇನೆ ಎಂದರು.




