ಬೆಳಗಾವಿ: ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣಗೊಳಿಸಿ, ಮಾತನಾಡಿದ ಅವರು, ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.
ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.
ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದರು.




