ಬೆಳಗಾವಿ: ಧರ್ಮಸ್ಥಳದ ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ನ್ಯಾಯಾಲಯದ ಅದೇಶದ ಮೇರೆಗೆ ಎಸ್‌ಐಟಿ ರಚಿಸಲಾಗಿದೆ. ಅದನ್ನು ತಪ್ಪು ಎನ್ನುವುದಾದರೆ, ನ್ಯಾಯಾಲಯದಲ್ಲೇ ಪ್ರಶ್ನೆ ಮಾಡಬೇಕಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ರಾಜ್ಯ ಸರ್ಕಾರವನ್ನು ಟೀಕಿಸಲು ಸರಿಯಾದ ವಿಚಾರಗಳಿಲ್ಲ. ಹೀಗಾಗಿ ಅನಗತ್ಯವಾಗಿ ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಮೊದಲೆಲ್ಲಾ ಗ್ಯಾರಂಟಿ ಯೋಜನೆಗಳ ವಿರುದ್ಧ ಟೀಕೆ ಮಾಡುವ ಪ್ರಯತ್ನ ಮಾಡಿದರು. ಅದನ್ನು ಯಾರೂ ಕೇಳಲಿಲ್ಲ. ಅನಂತರ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪಿಸಿ ಟೀಕೆ ಮಾಡುವ ಪ್ರಯತ್ನ ಮಾಡಿದರು. ಅದರಿಂದ ಯಾವುದೇ ಪ್ರಯೋಜನವಾಗದಿದ್ದಾಗ, ಈಗ ಧರ್ಮಸ್ಥಳದ ವಿಚಾರ ಹಿಡಿದು ಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಸ್ ಐ ಟಿ ರಚನೆಯಲ್ಲಿ ಕಾಂಗ್ರೆಸ್‌ನ ಪಾತ್ರ ಏನೂ ಇಲ್ಲ. ರಾಜ್ಯ ಸರ್ಕಾರಕ್ಕೆ ಇದರಿಂದ ಲಾಭವೂ ಇಲ್ಲ, ನಷ್ಟವೂ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಅದರ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಲಾಗುತ್ತಿದೆ. ಬಿಜೆಪಿಯವರು ದಿಕ್ಕು ತಪ್ಪಿಸಲು ರಾಜಕೀಯ ಮಾಡುತ್ತಿದ್ದಾರೆ ಎಂದರು.
ಇದೇ ವೇಳೆ ದಸರಾ ಉದ್ಘಾಟನೆ ವಿವಾದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬೂಕರ್ ಪ್ರಶಸ್ತಿ ಪಡೆದಿದ್ದ ಬಾನು ಮುಷ್ತಾಕ್ ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಬಿಜೆಪಿಯವರು ಎಲ್ಲವನ್ನೂ ವಿರೋಧಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಈ ಹಿಂದೆಲ್ಲಾ ಹಲವಾರು ಸಾಹಿತಿಗಳು, ಚಿಂತಕರು ಹಾಗೂ ಪ್ರಶಸ್ತಿ ವಿಜೇತರನ್ನು ಆಹ್ವಾನಿಸಿ ದಸರಾವನ್ನು ಉದ್ಘಾಟಿಸಲಾಗಿದೆ. ಅದರಂತೆ ಈ ಬಾರಿಯೂ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿದರು.
ವಿಧಾನಮಂಡಲದಲ್ಲಿ ಆರ್‌ಎಸ್‌ಎಸ್‌ನ ಪ್ರಾರ್ಥನ ಗೀತೆ ಹಾಡಿದ ಕಾರಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕ್ಷಮೆ ಕೇಳಿರುವುದು ಪಕ್ಷದ ಹಿತ ದೃಷ್ಟಿಯಿಂದ ಒಳ್ಳೆಯದು. ಇಲ್ಲವಾದರೆ ಅದು ಬೇರೆಬೇರೆ ರೀತಿಯ ವ್ಯಾಖ್ಯಾನ, ಚರ್ಚೆಗಳಿಗೆ ಕಾರಣವಾಗಿ ಗೊಂದಲಗಳಾಗುತ್ತಿದ್ದವು. ಕ್ಷಮೆ ಕೇಳುವ ಮೂಲಕ ಎಲ್ಲವೂ ಬಗೆ ಹರಿದಿದೆ ಎಂದರು.
ರಾಜಣ್ಣ ಅವರ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ತಮ್ಮ ಸಹಮತ ಇದೆ. ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಕೊಟ್ಟಂತೆ, ರಾಜಣ್ಣ ಅವರಿಗೂ ಅವಕಾಶ ನೀಡಬೇಕು ಎಂಬ ಬೇಡಿಕೆಗಳ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು.




