ಕಾರ್ಯಕರ್ತರನ್ನ ಬಳಸಿಕೊಂಡು ದೂರ ಮಾಡುತ್ತಾರೆ, ಕೆಲಸ ಮಾಡುವವರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆಯಿಲ್ಲ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನ ಗೆಲುವಿಗೆ ಶ್ರಮಿಸುತ್ತೇನೆ: ನೆ.ಲ.ನರೇಂದ್ರಬಾಬು
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಳೆದ 10 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನನ್ನನ್ನು ಸಮರ್ಪಣೆ ಮಾಡಿಕೊಂಡೆ. ಆದರೆ ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮತ್ತು ನನ್ನ ಕಾರ್ಯಕರ್ತರನ್ನು ದೂರಮಾಡಿದರು ಎಂದು ಬಿಜೆಪಿ ಪಕ್ಷದ ಹಿಂದುಳಿದ ವರ್ಗ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರ ಬಾಬು ಹೇಳಿದರು.
- ಭದ್ರೆ ಬಯಲುಸೀಮೆಗೆ ಹರಿದು ಬಂದಿರುವುದು ರೈತರ ಪಾಲಿಗೆ ಹೊಸ ಆಶಾಕಿರಣ: ಅಪ್ಸರ್ ಕೊಡ್ಲಿಪೇಟೆ
- ಹಸಿ ತ್ಯಾಜ್ಯದಿಂದ ವಿದ್ಯುತ್ ತಯಾರಿಸುತ್ತಿರುವ ಏಕೈಕ ವಾರ್ಡ್ ಯಡಿಯೂರು
- ಕಪ್ಪುಪಟ್ಟಿ ಧರಿಸಿ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
- ಪ್ರಿಯಾಂಕ್ ಖರ್ಗೆ ಅವರ ಗೃಹ ಇಲಾಖೆ ಯಾರನ್ನು ರಕ್ಷಿಸುತ್ತಿದೆ?: ಆರ್ ಅಶೋಕ್
- ಜಾಣ ಕುರುಡು, ಜಾಣ ಮೌನದ ಬಿಜೆಪಿ ಪಕ್ಷ ತಂದೆ ಮಕ್ಕಳ ಪಕ್ಷ: ನೆ.ಲ.ನರೇಂದ್ರಬಾಬು
ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬುರವರು ಬಿಜೆಪಿ ಪಕ್ಷದ ಹಿಂದುಳಿದ ವರ್ಗ ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ , ಮುಂದಿನ ರಾಜಕೀಯ ನಡೆಯನ್ನು ವಿವರಿಸಿದರು.
ಮಹಾನಗರ ಪಾಲಿಕೆ ಸದಸ್ಯನಾಗಿ ಮೂರು ಬಾರಿ ಮತ್ತು ಎರಡು ಬಾರಿ ಶಾಸಕನಾಗಿ ಕಳೆದ 40 ವರ್ಷಗಳಿಂದ ಸಾರ್ವಜನಿಕರ ಬೆಂಬಲದಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ ಎಂದರು.
ನನ್ನ ವಿರುದ್ದ ಪಿತೂರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಸುರೇಶ್ ಕುಮಾರ್, ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗೋಪಾಲಯ್ಯ ಪರ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದೆ ಎಂದರು.
ಜಾಣ ಕುರುಡು, ಜಾಣ ಮೌನ ಬಿಜೆಪಿ ಪಕ್ಷ ಮಾಡುತ್ತಿದೆ. ಪಕ್ಷಕ್ಕಾಗಿ ತ್ಯಾಗ ಮಾಡಿ ಎಂದರು. ಸರ್ಕಾರ ಬಂದ ಮೇಲೆ ನಮ್ಮ ಕಡೆ ನೋಡಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಟಿಕೇಟು ನೀಡಲಿಲ್ಲ. ಕೆಲಸ ಮಾಡುವವರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆಯಿಲ್ಲ. ಹಿಂಬಾಲಕರಿಗೆ ಮಾತ್ರ ಅವಕಾಶ ಎಂದರು.
ಬಿಜೆಪಿ ಪಕ್ಷ ತಂದೆ, ಮಕ್ಕಳ ಪಕ್ಷವಾಗಬಾರದು. ಇಡಿ ರಾಜ್ಯವನ್ನು ನಾಲ್ಕು ಬಾರಿ ಪ್ರವಾಸ ಮಾಡಿದರೂ ನನ್ನನ್ನೂ ಚನ್ನಾಗಿ ಬಳಸಿಕೊಂಡರು. ಎರಡು ವಿಧಾನಸಭಾ ಕ್ಷೇತ್ರ ಬಿಜೆಪಿ ಗೆಲುವಿನಲ್ಲಿ ನಾನು ಮತ್ತು ನನ್ನ ಕಾರ್ಯಕರ್ತರ ಶ್ರಮವಿದೆ. ಬೋರ್ಡ್, ಕಾರ್ಪೋರೇಷನ್ ಗಳಲ್ಲಿ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರೆ ಬಿಜೆಪಿ ಪಕ್ಷ ಜಾಣ ಕುರುಡು ರೀತಿಯಂತೆ ವರ್ತಿಸಿದೆ ಎಂದರು.
ಕಾಂಗ್ರೆಸ್ ಪಕ್ಷ ನನಗೆ ಹೆಚ್ಚಿನ ಅವಕಾಶ ನೀಡಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಉತ್ತಮ ಸರ್ಕಾರ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರ ಸಾರಥ್ಯದಲ್ಲಿ ಪಕ್ಷ ಸಂಘಟನೆ ರಾಜ್ಯಾದ್ಯಂತ ಬಿರುಸಿನಿಂದ ಜರುಗುತ್ತಿದೆ ಎಂದರು.
ಬಿಜೆಪಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತೀರ್ಮಾನವೇ ಅಂತಿಮವಾಗಿದೆ. ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ರಾಜ್ಯದ ಸಮಸ್ಯೆಗಳಿಗೆ ಬಿಜೆಪಿ ಸಂಸದರು ಸ್ಪಂದಿಸುವುದಿಲ್ಲ ಎಂದರು.
ನನ್ನ ಮತ್ತು ಜೊತೆಯಲ್ಲಿ ಇರುವ ಸ್ನೇಹಿತರು, ಕಾರ್ಯಕರ್ತರ ಜೊತೆಯಲ್ಲಿ ಸೆಪ್ಟಂಬರ್ 13ನೇ ತಾರೀಖು ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150 ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತನಾಗಿ ಶ್ರಮಿಸುತ್ತೇನೆ ಎಂದರು.




