ದೆಹಲಿ / ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಸಿದೆ.
ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಅಣ್ಣ ಸಾಹೇಬ್ ಜೊಲ್ಲೆ ಅವರ ಸ್ಪರ್ಧೆಗೆ ಹಸಿರು ನಿಶಾನೆ ತೋರಲು ನಿರ್ಧರಿಸಲಾಗಿದೆ. ಆದರೆ ಈ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಂಸದ ರಮೇಶ್ ಕಟ್ಟಿ ತೀವ್ರ ಪ್ರಯತ್ನ ನಡೆಸಿದ್ದು, ಇವರ ಪರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಬಲ ಲಾಬಿ ನಡೆಸಿದ್ದಾರೆ. ಹೀಗಾಗಿ ಅಂತಿಮ ತೀರ್ಮಾನ ಇನ್ನೂ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಅದೇ ರೀತಿ ವಿಜಯಪುರ ಮೀಸಲು ಕ್ಷೇತ್ರದಿಂದ ಹಿರಿಯ ನಾಯಕ ರಮೇಶ್ ಜಿಗಜಣಗಿ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಗಿಜಣಿಗೆ ಅವರು ಈ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೈಕಮಾಂಡ್ ಗೆ ವರದಿ ಲಭ್ಯವಾಗಿದೆ.
ಆದರೆ ತೀವ್ರ ಅನಾರೋಗ್ಯ ಪಿಡಿತರಾಗಿರುವ ಅವರ ಬದಲಿಗೆ ಮಾಜಿ ಸಚಿವ ಎಂ ಗೋವಿಂದ ಕಾರಜೋಳ ಅವರ ಪುತ್ರನನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಬೇಕು ಎಂದು ಯಡಿಯೂರಪ್ಪ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಆಡಳಿತ ವಿರೋಧಿ ಅಲೆ, ವಯಸ್ಸಿನ ಹಿನ್ನೆಲೆ, ಅನಾರೋಗ್ಯ, ಕಾರ್ಯಕರ್ತರ ಕಡೆಗಣನೆ, ವೈಯಕ್ತಿಕ ಕಾರಣಗಳಿಂದ ಈ ಬಾರಿ 10 ರಿಂದ 12 ಲೋಕಸಭಾ ಸದಸ್ಯರಿಗೆ ಟಿಕೆಟ್ ಕೈತಪ್ಪುವ ಸಂಭವವಿದ್ದು, ಈಗಾಗಲೇ ಬಿಜೆಪಿ ಕಣಕ್ಕಿಳಿಸುವ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಉತ್ತರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಬೀದರ್, ರಾಯಚೂರು, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿಲ್ಲ.
ಕರ್ನಾಟಕದ ಲೋಕಸಭಾ ಕ್ಷೇತ್ರಗಳೂ ಸೇರಿದಂತೆ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ವರಿಷ್ಠರು ಸೋಮವಾರ ತಡರಾತ್ರಿವರೆಗೆ ಕಸರತ್ತು ನಡೆಸಿದ್ದು, ಮಂಗಳವಾರವೂ ಸಭೆ ನಡೆಯಿತು.
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾಗಿದ್ದರು. ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ಎರಡನೇ ಪಟ್ಟಿಯನ್ನು ಯಾವುದೇ ಕ್ಷಣದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
ಮೈಸೂರು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು, ಇವರ ಬದಲಿಗೆ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.
ಈ ಕ್ಷೇತ್ರದಿಂದ ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ಸಿದ್ಧತೆ ನಡೆಸಿತ್ತಾದರೂ ಯದುವೀರ್ ಅವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಮಂಜುನಾಥ್ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೂ ಈ ಬಾರಿ ಟಿಕೆಟ್ ಕೈತಪ್ಪಲಿದೆ. ಇವರ ವಿರುದ್ಧ ಆಡಳಿತ ವಿರೋಧಿ ಅಲೆ ಮತ್ತು ಕಾರ್ಯಕರ್ತರ ಅಸಮಾಧಾನ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅವರ ಬದಲಿಗೆ ಯುವ ಮುಖ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತರದಿಂದ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ವರಿಷ್ಠರು ಉತ್ಸುಕರಾಗಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯ ಆಯ್ಕೆ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ.
ಬೀದರ್, ಉತ್ತರ ಕನ್ನಡ, ಉಡುಪಿ–ಚಿಕ್ಕಮಗಳೂರು, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ ಸೇರಿದಂತೆ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿದೆ. ಹಾಲಿ ಸಂಸದರಾದ ಅನಂತ ಕುಮಾರ್ ಹೆಗಡೆ, ನಳಿನ್ ಕುಮಾರ್ ಕಟೀಲ್, ಭಗವಂತ ಖೂಬಾ, ಪ್ರತಾಪ ಸಿಂಹ, ಶೋಭಾ ಕರಂದ್ಲಾಜೆ ಕಾರ್ಯವೈಖರಿಗೆ ಬಿಜೆಪಿಯಲ್ಲೇ ಅಸಮಾಧಾನ ವ್ಯಕ್ತವಾಗಿದೆ.
ಶೋಭಾ ಕರಂದ್ಲಾಜೆ ಅವರ ಬೆನ್ನಿಗೆ ಬಿ.ಎಸ್.ಯಡಿಯೂರಪ್ಪ ನಿಂತಿದ್ದು, ಶೋಭಾ ಅವರನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನ ಬದಲಿಸುವ ಹೇಳಿಕೆ ನೀಡಿರುವ ಅನಂತಕುಮಾರ್ ಹೆಗಡೆ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ಟಿಕೆಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ.
ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳು:
- ಬೆಳಗಾವಿ – ಜಗದೀಶ್ ಶೆಟ್ಟರ್
- ಬೆಂಗಳೂರು ಗ್ರಾಮಾಂತರ – ಡಾ.ಸಿ.ಎನ್.ಮಂಜುನಾಥ್
- ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ
- ವಿಜಯಪುರ – ರಮೇಶ್ ಜಿಗಜಿಣಗಿ
- ಬಾಗಲಕೋಟೆ – ಪಿ.ಸಿ. ಗದ್ದಿಗೌಡರ್
- ಶಿವಮೊಗ್ಗ – ಬಿ ವೈ ರಾಘವೇಂದ್ರ
- ಹಾವೇರಿ – ಬಸವರಾಜ ಬೊಮ್ಮಾಯಿ
- ಧಾರವಾಡ – ಪ್ರಲ್ಹಾದ್ ಜೋಶಿ
- ಕೊಪ್ಪಳ – ಸಂಗಣ್ಣ ಕರಡಿ
- ಕಲಬುರಗಿ – ಉಮೇಶ್ ಜಾದವ್
- ಬಳ್ಳಾರಿ – ಬಿ ಶ್ರೀರಾಮುಲು
- ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್




