ದಾವಣಗೆರೆ: ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಹಾಗೂ ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ ನೀಡಲಾಗುವುದು. ನಾನು ನುಡಿದ ಮಾತಿನಂತೆ ನಡೆಯುವವನು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಿನ್ನೆ ದಾವಣಗೆರೆಯಲ್ಲಿ ಲೋಕಸಭಾ ಚುನಾವಣೆಯ ಅಂಗವಾಗಿ ಆಯೋಜಿಸಿದ್ದ ಪ್ರಜಾಧ್ವನಿ- ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ Bharatiya Janata Party (BJP) ಮತ್ತು Narendra Modi ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದರು.
BJP Karnataka 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಈ ಹಿಂದಿದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದು ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ.
ಬಿಜೆಪಿ ಜಾತಿಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ ಎಂದರು.
ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10 ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು. ಆದರೆ ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯನ್ನು ಕೊಡಬಹುದಾಗಿದೆ. ಮೋದಿಯವರು ಸಂವಿಧಾನವನ್ನು ಪೂರ್ಣ ತಿಳಿದಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾವು ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದೇವೆಯೇ ಹೊರತು. ಒಬ್ಬರ ಮೀಸಲಾತಿಯನ್ನು ಕಿತ್ತು ಮತ್ತೊಬ್ಬರಿಗೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿಯೇ ಇಲ್ಲ ಎಂದರು.
ಬಿಜೆಪಿ ಹಾಗೂ ಆರ್ ಎಸ್ ಎಸ್ ಮೀಸಲಾತಿಯನ್ನು ಬೆಂಬಲಿಸಲಿಲ್ಲ. ಆದ್ದರಿಂದ ಮೀಸಲಾತಿ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಮಂಡಲ್ ವರದಿಯಂತೆ ಉನ್ನತ ಶಿಕ್ಷಣಸಂಸ್ಥೆಗಳಲ್ಲಿ ಮೀಸಲಾತಿ ತರಲು ಬಿಜೆಪಿ ವಿರೋಧಿಸಿದರು. ಮಂಡಲ್ ಪಂಚಾಯತಿ, ನಗರ ಸಭೆಗಳಲ್ಲಿ ಮಹಿಳೆಯರು, ದಲಿತರು, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಿಕೆಯನ್ನು ಎತ್ತಿಹಿಡಿಯಿತು. ಚುನಾವಣೆ ಬಂದಾಗ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ ಎಂದರು.
ಮೋದಿಯವರು ಹತ್ತು ವರ್ಷಗಳ ಕಾಲ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ರೈತರ ಸಾಲ ಮನ್ನಾ ಮಾಡದೇ ಅದಾನಿ ಹಾಗೂ ಅಂಬಾನಿ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ಶ್ರೀಮಂತರ ಪರವಾಗಿರುವವರು. ಆದರೆ, ಇವರು ಬಡವರ ಪರವಾಗಿ ಇರುವವರು ಎಂದು ಮೋಸ ಹೋಗಿದ್ದಾಯ್ತು. ನಂಬಿಕೆ ದ್ರೋಹ ಎಸಗಿದ ಮೋದಿಯವರಿಗೆ ಮತ ಹಾಕಬೇಕೆ? ಎಂದು ಪ್ರಶ್ನಿಸಿದರು.
ನಮ್ಮ ಸರ್ಕಾರ ಕೊನೆಯವರೆಗೂ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಅಷ್ಟೇ ಸತ್ಯ. ನಮಗೆ ತೊಂದರೆ ಕೊಡಲು ವಿನಯ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಅವರು ಗೆಲ್ಲುವುದಿಲ್ಲ. ಏಕೆಂದರೆ ಬಿಜೆಪಿ ಜೊತೆಗೆ ಶಾಮೀಲಾಗಿದ್ದಾರೆ. ಕನಕ ಗುರುಪೀಠದ ನಿರಂಜನಾನಂದಾಪುರಿ ಸ್ವಾಮಿಗಳು ಮತ್ತು ನಾನು ವಿನಯ್ ಕುಮಾರ್ ಅವರೊಂದಿಗೆ ಮಾತನಾಡಿ, ನಿಲ್ಲುವುದು ಬೇಡ ಎಂದು ಸಲಹೆ ನೀಡಿದಾಗ ಒಪ್ಪಿಕೊಂಡ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ನಿಮಗೆ ನಾನು ಬೇಕೋ, ವಿನಯ್ ಕುಮಾರ್ ಬೇಕೋ ನಿರ್ಧರಿಸಿ ಎಂದರು.
ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ. ನನಗೆ ಶಕ್ತಿ ನೀಡಿ ಎಂದು ಕೈಮುಗಿದು ಮನವಿ ಮಾಡುತ್ತೇನೆ ಎಂದರು.




