ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸಿದ್ಧತಾ ಸಭೆ

2 years ago

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಭರ್ಜರಿ ಸಿದ್ಧತೆ ಆರಂಭಿಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಸಭೆ ನಡೆಸಲಾಯಿತು. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಮನ್ವಯತೆ ಕಾಪಾಡುವುದು, ಚುನಾವಣೆ ಸಿದ್ದತೆ, ಕ್ಷೇತ್ರ ಹಂಚಿಕೆ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಎಲ್ಲೆಲ್ಲಿ ಜೆಡಿಎಸ್ ಪ್ರಾಬಲ್ಯವಿದೆಯೋ ಅಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ, ಈಗಲೇ ಚುನಾವಣಾ ತಯಾರಿ ನಡೆಸುವುದು, ಚುನಾವಣೆಯಲ್ಲಿ ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ಸೂಚಿಸುವುದು ಎಂಬುದರ ಬಗ್ಗೆ ಸಮಾಲೋಚನೆ ಮಾಡೆಸಲಾಯಿತು.

ಮತ್ತೊಂದೆಡೆ ಖಾಸಗಿ ರೆಸಾರ್ಟ್ ನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ವಿಜಯೇಂದ್ರ, ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದರು.

ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ. ಇದಕ್ಕೆಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಡ ಚುನಾವಣೆಯಲ್ಲಿನ ಗೆಲುವು ಸಾಕ್ಷಿ ಎಂದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲಿದ್ದು, ಮೂರನೇ ಬಾರಿಯೂ ನರೇಂದ್ರಮೋದಿಯವರೇ ಪ್ರಧಾನಮಂತ್ರಿ ಆಗಲಿದ್ದಾರೆ. ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗಲಿದೆ ಎಂದರು.

ಕಾಂಗ್ರೆಸ್ ಸರಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಢೀಕರಣದ ವಿಚಾರದಲ್ಲಿ ವಿಫಲವಾಗಿದ್ದಾರೆ. ಇದರಿಂದ ಭೀಕರ ಬರಗಾಲ, 500 ರೈತರ ಆತ್ಮಹತ್ಯೆ ಹೊರತಾಗಿಯೂ ರಾಜ್ಯ ಸರಕಾರ ಪರಿಹಾರ ಕೊಡದೆ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.

Leave a Reply