ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹೋರಾಟ ರೂಪಿಸಲಿವೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹೋರಾಟ ರೂಪಿಸಲಿವೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬೇರೆ ಅಲ್ಲ, ಬಿಜೆಪಿ ಬೇರೆ ಅಲ್ಲ ಎಂದು ದೇವೇಗೌಡರು ಅನೇಕ ಬಾರಿ ಹೇಳಿದ್ದಾರೆ. ಮೋದಿ ನಾಯಕತ್ವದ ಬಗ್ಗೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಲ್ಲಿ ಈ ಸರ್ಕಾರವನ್ನು ತೊಲಗಿಸಬೇಕು ಅದಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಭಿನ್ನರ ಕರೆದು ಪ್ರಹ್ಲಾದ್ ಜೋಶಿ ಮಾತಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ಜೋಶಿ ಪ್ರಯತ್ನ ಸ್ವಾಗತಾರ್ಹ. ಅಸಮಾಧಾನಿತರ ಜೊತೆ ನಾನು ಮಾತನಾಡಲು ಸಿದ್ಧ. ಪ್ರತಿನಿತ್ಯ ಬಿಜೆಪಿ ಕಚೇರಿಗೆ ಬರುತ್ತೇನೆ. ವಾರಕ್ಕೊಮೆ ಜಿಲ್ಲೆಗಳಿಗೆ ಹೋಗುತ್ತೇನೆ. ಇದರಿಂದ ಪಕ್ಷ ಸಂಘಟನಾತ್ಮಕವಾಗಿ ಬಲಗೊಳ್ಳಲಿದೆ ಹಾಗೂ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಹೊಸ ಹುರುಪು ಬರಲಿದೆ ಎಂದರು.
ರಾಜ್ಯ ಸರ್ಕಾರದ ಯೋಜನೆಗಳು ಅನುಷ್ಠಾನವಾಗಬೇಕಾದರೆ ಹಣ ನೀಡಲೇಬೇಕಾದ ದುಸ್ತಿತಿ ರಾಜ್ಯದಲ್ಲಿ ನಿರ್ಮಾಣವಾಗಿದ್ದು, ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ. ಜನತೆ ಶೀಘ್ರದಲ್ಲೇ ಉತ್ತರ ಕೊಡಲಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ಹಣ ನೀಡದಿದ್ದರೆ ಯೋಜನೆಗಳು ಅನುಷ್ಠಾನಗೊಳ್ಳುವುದಿಲ್ಲ. ಫಲಾನುಭವಿಗಳು ಇಂತಿಷ್ಟು ಕಮೀಷನ್ ನೀಡಿದರೆ ಮಾತ್ರ ಕಾರ್ಯರೂಪಕ್ಕೆ ಬರುತ್ತವೆ. ರಾಜ್ಯದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದರು.




