ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಿಲ್ಲ. ಆದರೆ ಅವರು ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಮಾಡಿಕೊಳ್ಳಲಿ. ಆದರೆ ಅಧಿಕೃತವಾಗಿ ನಾವು ಅನುಮತಿ ನೀಡುವುದಿಲ್ಲ. ಅಗತ್ಯವಾದ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಪಾದಯಾತ್ರೆ ಮಾಡುವಾಗಲೂ ಅವರು ಅನುಮತಿ ನೀಡಿರಲಿಲ್ಲ. ಅದೇ ರೀತಿ ನಾವು ಅನುಮತಿಸುವುದಿಲ್ಲ. ಹಾಗೆಯೇ ಅವರ ಪಾದಯಾತ್ರೆಗೆ ತಡೆ ಮಾಡುವುದಿಲ್ಲ ಎಂದರು.
ಪ್ರತಿಪಕ್ಷಗಳ ಈ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ನಿಂದ ಹೋರಾಟ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಣನೀತಿ ರೂಪಿಸುತ್ತಾರೆ. ರಾಜಕೀಯವಾಗಿ ನಾವೂ ಕೂಡ ಉತ್ತರ ನೀಡಲೇಬೇಕಿದೆ. ವಿಪಕ್ಷಗಳು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ರಾಜಕೀಯವಾಗಿಯೇ ಮಾತನಾಡುತ್ತೇವೆ ಎಂದರು.




