ಬೆಂಗಳೂರು: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ Bharatiya Janata Party (BJP) ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದ್ದಾರೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಸಾಮಾಜಿಕ ಜಾಲತಾಣಗಳಲ್ಲಿ 2024ರ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಈ ಬಾರಿ 400 ದಾಟುತ್ತೇವೆ ಎಂದು ಪ್ರಧಾನಿ Narendra Modi ಯವರು ಹೇಳುತ್ತಾರೆ, ಆದರೆ ಅಭಿವೃದ್ಧಿ ಶೂನ್ಯ ಆಡಳಿತವೇ ಅವರ ಈ ವರೆಗಿನ ಸಾಧನೆ. ಅಭಿವೃದ್ಧಿ ಮಾಡಿದ್ದರೆ ಟ್ರೇಲರ್ ಆರಂಭ ಆಗುತ್ತಿತ್ತು, ಹಾಗಾಗಿ ಇನ್ನು ಬಾಕಿ ಉಳಿದಿರುವುದು ಸುಳ್ಳಿನ ಪಿಕ್ಚರ್ ಮಾತ್ರ ಎಂದಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದು ನಿಜ. ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಅವರ ಮಾತನ್ನೇ ನಾನು ಈಗ ನೆನಪು ಮಾಡಿದೆ. ಸತ್ಯ ಹೇಳಿದರೆ ಗರ್ವ ತೋರಿಸಿದಂತೆ ಆಗುತ್ತದಾ? ಎಂದು ಪ್ರಶ್ನಿಸಿದ್ದಾರೆ.
ತಮಗೆ ಮೋದಿಯವರೊಂದಿಗೆ ಅವಿನಾಭಾವ ಸಂಬಂಧವಿದೆ ಎಂದು ದೇವೇಗೌಡರು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ. ಸುಳ್ಳು ಯಾಕೆ ಹೇಳುತ್ತಾರೆ. ಎನ್.ಡಿ.ಎ ಬಂದರೆ ಮಾಡಿಸುತ್ತೇನೆ ಎನ್ನುವವರು ಈಗಲೇ ಮಾಡಿಸಲಿ ಎಂದಿದ್ದಾರೆ.
ಜೆಡಿಎಸ್‌ನವರು ಮೈತ್ರಿ ಎಂದರೇನು ಎಂದು ಕಳೆದ ಬಾರಿಯೇ ತೋರಿಸಿದ್ದಾರೆ. ಮೈತ್ರಿಯಲ್ಲಿ ನಾಯಕರು ಜೊತೆಯಾಗುವುದು ಮುಖ್ಯವಲ್ಲ, ಜನರು ಒಂದಾಗಬೇಕು. ಜನರು ಯಾವ ಪಕ್ಷಕ್ಕೂ ಸೇರಿದವರಲ್ಲ, ಮೈತ್ರಿ ಮಾಡಿಕೊಂಡಿದ್ದಾರೆ ಎಂದು ನಾಯಕರ ಮಾತು ಕೇಳುವವರಲ್ಲ ಎಂದಿದ್ದಾರೆ.




