ಬೆಂಗಳೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆಯನ್ನು ಸಮರ್ಥಿಸಿ ಪೋಸ್ಟ್ ಒಂದನ್ನು ಹಾಕಿದ್ದ ಬಿಜೆಪಿ ನಾಯಕ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ತಮ್ಮ ಪೋಸ್ಟ್ ಅಳಿಸಿ ಹಾಕಿದ್ದಾರೆ. ಹಾಗೆಯೇ ಇದಕ್ಕಾಗಿ ಕ್ಷಮೆಯಾಚಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕಾಗಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಕೋರಿದ್ದಾರೆ.
ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರ ಕೃತ್ಯವನ್ನು ಪ್ರಶಂಸಿಸಿದ್ದ ಭಾಸ್ಕರ್ ರಾವ್, ಇದು ಕಾನೂನಿನ ಪ್ರಕಾರ ತಪ್ಪಾದರೂ, ಈ ವಯಸ್ಸಿನಲ್ಲಿ ಯಾವುದೇ ಪರಿಣಾಮಗಳನ್ನು ಲೆಕ್ಕಿಸದೆ ನಿಲುವು ತೆಗೆದುಕೊಂಡು ಅದರಲ್ಲಿ ದೃಢವಾಗಿ ನಿಲ್ಲುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ ಎಂದು ಎಕ್ಸ್ ನಲ್ಲಿ ವಕೀಲನ ನಡೆಯನ್ನು ಪ್ರಶಂಸಿಸಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಮತ್ತೆ ಪ್ರತಿಕ್ರಿಯಿಸಿದ ಭಾಸ್ಕರ್ ರಾವ್, ಇಷ್ಟೊಂದು ಶಿಕ್ಷಿತ, ವಯಸ್ಕ, ಕಾನೂನುಬದ್ಧವಾಗಿ ತನ್ನ ಕೃತ್ಯ ತಪ್ಪು ಎಂದು ಮತ್ತು ಅದರ ಪರಿಣಾಮಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರೂ ವ್ಯಕ್ತಿಯೊಬ್ಬರು ಈ ರೀತಿ ಮಾಡಿರುವುದಕ್ಕೆ ನನ್ನ ದಿಗ್ಭ್ರಮೆ ಮತ್ತು ಅಚ್ಚರಿಯ ಪ್ರತಿಕ್ರಿಯೆಯಾಗಿತ್ತು. ನಾನು ಸುಪ್ರೀಂ ಕೋರ್ಟ್, ಮುಖ್ಯ ನ್ಯಾಯಮೂರ್ತಿ ಅಥವಾ ಯಾವುದೇ ಸಮುದಾಯವನ್ನು ಅವಮಾನಿಸಿಲ್ಲ. ನನ್ನ ಪೋಸ್ಟ್ ನಿಂದ ಕೋಪಗೊಂಡಿದ್ದರೆ ಅಥವಾ ನೋವಾಗಿದ್ದರೆ ಕ್ಷಮಿಸಿ ಎಂದು ಕ್ಷಮೆ ಕೋರಿದ್ದಾರೆ.




