ಚಿಕ್ಕಮಗಳೂರು: ಬಿಜೆಪಿ ನಾಯಕ ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸೀಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಿ ಟಿ ರವಿ ವಿರುದ್ಧದ ಬೆದರಿಕೆ ಪತ್ರ, ಕರೆ ಕುರಿತು ಶೃಂಗೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅವರನ್ನು (ಸಿ ಟಿ ರವಿ) ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ ಎಂದು ಸವಾಲೆಸೆದರು.




