ಬೆಂಗಳೂರು: ಮಂಗಳೂರಿನ ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ಮತ್ತು ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯ ಸರ್ಕಾರದ ಅತಿಯಾದ ತುಷ್ಟೀಕರಣ ನೀತಿ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಯಡಿಯೂರಪ್ಪ ದುಷ್ಕರ್ಮಿಗಳಿಗೆ ಕಾನೂನಿನ ಕಿಂಚಿತ್ತೂ ಭಯವೂ ಇಲ್ಲದಂತಾಗಿದ್ದು, ಇಂತಹ ಅಮಾನುಷ ಅಪರಾಧಗಳು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ರಾಜ್ಯ ಸರ್ಕಾರ ಕೂಡಲೇ ಅಪರಾಧಿಗಳನ್ನು ಬಂಧಿಸಬೇಕು ಎಂದರು.
ಸುಹಾಸ್ ಬರ್ಬರ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ. ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ ಎಂದರು.
ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ. ಇಂತಹ ದೇಶದ್ರೋಹಿಗಳನ್ನು ಗುಂಡಿಕ್ಕುವ ಕಾನೂನು ಬಂದರೆ ಮಾತ್ರ ದೇಶ ಸುರಕ್ಷಿತವಾಗಿರುತ್ತದೆ. ಇನ್ನೆಷ್ಟು ಹಿಂದೂ ಕಾರ್ಯಕರ್ತರ ಬಲಿಯಾಗಲಿ ಎಂದು ಸಿದ್ದರಾಮಯ್ಯ ಬಯಸುತ್ತಾರೋ ಗೊತ್ತಿಲ್ಲ. ಲವ್ ಜಿಹಾದ್ ಆದಾಗ, ಪಾಕಿಸ್ತಾನ ಜಿಂದಾಬಾದ್ ಎಂದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದರು.
ಸುಹಾಸ್ ಎಲ್ಲೆಲ್ಲಿ ಓಡಾಡುತ್ತಾನೆ, ಆತನ ಬಳಿ ಆಯುಧ ಇಲ್ಲವೆಂದು ತಿಳಿದಿದ್ದು ಹೇಗೆ? ಈ ವಿಚಾರದಲ್ಲಿ ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿರುವ ಅನುಮಾನವಿದೆ. ಇಂತಹ ಘಟನೆ ನಡೆದಾಗ ಸಿಎಂ ಸಿದ್ದರಾಮಯ್ಯ ಸಬೂಬು ಹೇಳುವ ನಡೆ ತೋರುತ್ತಾರೆ. ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪಾಕಿಸ್ತಾನ ಜಿಂದಾಬಾದ್ ಎಂದರೂ ಏನೂ ಅನ್ನಿಸುವುದಿಲ್ಲ. ಅವರದ್ದು ಅಂತಹ ಎಮ್ಮೆ ಚರ್ಮ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ ದೃಶ್ಯ ನಾವು ಯಾವ ನೆಲದಲ್ಲಿ ವಾಸಿಸುತ್ತಿದ್ದೇವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಈ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಸುಹಾಸ್ ಬರ್ಬರವಾಗಿ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ ಎಂದು ಆಗ್ರಹಿಸಿದರು.
ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮದ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಹಿಂದೂ ಕಾರ್ಯಕರ್ತನನ್ನು ಕೊಚ್ಚಿಕೊಂಡಿರುವ ಮಂಗಳೂರು ಘಟನೆಯನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಮೇಲಿಂದ ಮೇಲೆ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎಂದರು.
ಸಂಘ ಪರಿವಾರ ನಾಯಕ ಪ್ರಭಾಕರ್ ಭಟ್ ಪ್ರತಿಕ್ರಿಯೆ ನೀಡಿದ್ದು, ಧರ್ಮ ,ದೇಶಕ್ಕಾಗಿ ಹೋರಾಟ ಮಾಡುವವರು ಕ್ಷಣ ಕ್ಷಣ ಕ್ಕೂ ಎಚ್ಚರ ವಾಗಿರಬೇಕಾದ ಪರಿಸ್ಥಿತಿ ಇದೆ. ಭಯದ ವಾತಾವರಣ ಸೃಷ್ಟಿ ಮಾಡುವ ಪ್ರಯತ್ನ ನಡೆದಿದೆ ಎಂದರು.
ಸಾವಿರಾರು ವರ್ಷದಿಂದ ರಾಕ್ಷಸರು ಸಜ್ಜನರ ಮೇಲೆ ಆಕ್ರಮಣ ಮಾಡುತ್ತಿದ್ದಾರೆ. ಅದು ಈಗಲೂ ಮುಂದುವರಿದಿದೆ ಇದರ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ. ಸುಹಾಸ್, ಫಾಜಿಲ್ ಕೊಲೆಯಲ್ಲಿ ಅಪರಾಧಿ ಎಂದು ಇನ್ನೂ ಸಾಬೀತಾಗಿಲ್ಲ ಎಂದರು.




