ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರಾಟೆ ಪ್ರಚಾರ ನಡೆಸಿರುವ ನಾಯಕ ರಾಹುಲ್ ಗಾಂಧಿ ಇದೀಗ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ಪ್ರಸ್ತಾಪಿಸುವ ಮೂಲಕ ಬಿಜೆಪಿ ಮತ್ತು ವಾಗ್ದಾಳಿ ನಡೆಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತಯಾಚನೆ ಮಾಡಿದ ಅವರು, ಬಹಿರಂಗ ಸಭೆಯಲ್ಲಿ ಮಾತನಾಡಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದರು.
ಹಾಸನದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಇದು ಒಂದು ಲೈಂಗಿಕ ಹಗರಣವಲ್ಲ. ಇದೊಂದು ಸಮೂಹ ಅತ್ಯಾಚಾರ ಪ್ರಕರಣವಾಗಿದೆ. ಅಂತಹ ವ್ಯಕ್ತಿಯ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಮತಯಾಚನೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರಿಗೆ ನೀಡಿದ ಮತ ನನಗೆ ನೀಡಿದಂತೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ ಪ್ರಧಾನಿ ಮತ್ತು ಬಿಜೆಪಿಯವರು ರಾಜ್ಯ ಮತ್ತು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು. ಆದರೂ ಆತನೊಂದಿಗೆ ಪ್ರಧಾನಿ ವೇದಿಕೆ ಹಂಚಿಕೊಂಡಿದ್ದಾರೆ. ಮತಯಾಚನೆ ಮಾಡಿದ್ದಾರೆ. ಈ ಮೂಲಕ ದೇಶದ ಪ್ರತಿಯೊಬ್ಬ ಮಹಿಳೆಗೂ ಅಪಮಾನ ಮಾಡಿದ್ದಾರೆ. ಇದಕ್ಕಾಗಿ ನರೇಂದ್ರ ಮೋದಿ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರೂ ದೇಶದ ಮಹಿಳೆಯರಿಗೆ ಕೈ ಮುಗಿದು ತಲೆಬಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಜಗತ್ತಿನಲ್ಲೇ ಇಂತಹ ಘಟನೆಯನ್ನು ನೋಡಿರಲಿಲ್ಲ. ವಿಶ್ವದಲ್ಲೇ ಸಮೂಹ ಅತ್ಯಾಚಾರಿಯ ಪರವಾಗಿ ಪ್ರಧಾನಿ ಮತಯಾಚಿಸಿದ್ದಾರೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಬಿಜೆಪಿಯವರಿಗೆ ಅಧಿಕಾರ ಬೇಕು ಎಂದಾದರೆ ಅವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಇದು ಅವರ ಸಿದ್ಧಾಂತ ಕೂಡ ಎಂದರು.
ಪ್ರಧಾನಿಯವರ ಬಳಿ ಗುಪ್ತಚರ ಸಂಸ್ಥೆ, ವಿದೇಶಾಂಗ ಸಚಿವಾಲಯ ಸೇರಿದಂತೆ ಹಲವಾರು ಸಂಸ್ಥೆಗಳಿದ್ದರೂ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಸರ್ಕಾರ ಈ ಹಗರಣದಲ್ಲಿ ನಿಷ್ಪಕ್ಷಪಾತವಾದ ಕ್ರಮಗಳನ್ನು ಕೈಗೊಂಡು ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಬದ್ಧವಾಗಿದೆ. ಜನರು ಬದಲಾವಣೆ ಬಯಸುವ ಸಮಯ ಬಂದಿದೆ ಎಂದರು.




