ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಕ್ರಮಗಳದ್ದೇ ಬಾರಿ ಸದ್ದು ಕೇಳಿಬರುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾದರಿಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲೂ ಅಕ್ರಮ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ್ದು ಹಲವು ಬಿಜೆಪಿ ನಾಯಕರು ಆತಂಕಕ್ಕೆ ಸಿಲುಕಿದ್ದಾರೆ.
ಈ ಆತಂಕದ ನಡುವೆ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಲ್ಯಾಪುರ ಅವರ ಕಲಬುರ್ಗಿಯಲ್ಲಿನ ಮನೆಯ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಸುನಿಲ್ ವಲ್ಲ್ಯಾಪುರ ಪುತ್ರ ವಿನಯ್ ವಲ್ಲ್ಯಾಪುರ ಮೇಲೆ ಭೋವಿ ನಿಗಮದ 12 ಕೋಟಿ ದುರ್ಬಳಕೆ ಮಾಡಿಕೊಂಡ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳು ಕೆಲ ಮಹತ್ವದ ದಾಖಲೆ ಪತ್ರಗಳನ್ನು ಸಂಗ್ರಹಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.


