ಸಕಾಲಕ್ಕೆ ಬಿಬಿಎಂಪಿ ಚುನಾವಣೆ ನಡೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲ್ಲಿಲ
ಬಿಬಿಎಂಪಿ ಚುನಾವಣೆ ಗೆಲ್ಲಲು ಸದಸ್ಯತ್ವ ಸಂಖ್ಯೆ ಹೆಚ್ಚು ಮಾಡಿ
ಬೆಂಗಳೂರು: ಜಯನಗರದ ಭಾರತೀಯ ಜನತಾ ಪಾರ್ಟಿ- ಬೆಂಗಳೂರು ದಕ್ಷಿಣ ಜಿಲ್ಲೆ ಸದಸ್ಯತ್ವ ಅಭಿಯಾನ ಪರಿಶೀಲನಾ ಸಭೆ ನಡೆಯಿತು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ, ಜಿಲ್ಲಾಧ್ಯಕ್ಷರಾದ ಸಿ.ಕೆ.ರಾಮಮೂರ್ತಿ, ಶಾಸಕರಾದ ಕೃಷ್ಣಪ್ಪ, ರವಿಸುಬ್ರಮಣ್ಯ ಮತ್ತು ಮಾಜಿ ಮೇಯರ್ ಎಸ್.ಕೆ.ನಟರಾಜ್, ಉಪಾಧ್ಯಕ್ಷ ಕೆ.ಉಮೇಶ್ ಶೆಟ್ಟಿ, ಬಿಜೆಪಿ ಮುಖಂಡ ರವೀಂದ್ರ, ಹಿಂದುಳಿದ ವರ್ಗದ ಬಿ.ಸೋಮಶೇಖರ್, ತಾರ ಅನುರಾಧ, ಮಂಡಲದ ಅಧ್ಯಕ್ಷರುಗಳಾದ ವಿಶ್ವನಾಥಗೌಡ, ಟಿ.ವಿ.ಕೃಷ್ಣ ಭಾಗವಹಿಸಿದ್ದರು.
ಬಿ.ವೈ.ವಿಜಯೇಂದ್ರ ಮಾತನಾಡಿ, ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿರವರು ಒಂದು ದೇಶ ಒಂದು ಚುನಾವಣೆ ಮಸೂದೆ ಜಾರಿಗೆ ಬಂದಿದೆ. ಇದರಿಂದ ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದರು.
ಸದಸ್ಯತ್ವ ಅಭಿಯಾನ ಮಂದಗತಿಯಲ್ಲಿ ಸಾಗುತ್ತಿದೆ. ಇದಕ್ಕೆಲ್ಲ ಕಾರಣ ನಗರ ಬಿಜೆಪಿ ಶಾಸಕರು, ಬಿಬಿಎಂಪಿ ಚುನಾವಣೆ ಸಕಾಲದಲ್ಲಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಹಿಂದೆ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಜಾತಿ, ಮತ ಭೇದ ಇಲ್ಲದೇ ಎಲ್ಲರು ಒಂದೇ ಏನ್ನುವ ಕಾಲವಾಗಿತ್ತು. ಆದರೆ ಇಂದು ಜಾತಿಯ ಮೇಲೆ ರಾಜಕೀಯ ನಡೆಯುತ್ತಿದೆ ಎಂದರು
ವಿದ್ಯುತ್ ದರ ಹೆಚ್ಚಳ ವಿರುದ್ದ ವಿಧಾನಸೌಧ ಮುಂದೆ ಜೆ.ಹೆಚ್.ಪಟೇಲ್ ಸರ್ಕಾರದ ವಿರುದ್ಧ ಹೋರಾಟ, ಈದ್ಗಾ ಮೈದಾನ ವಿರುದ್ಧ ಹೋರಾಟ ಮಾಡಿದ ಬಿ.ಎಸ್.ಯಡಿಯೂರಪ್ಪರವರ ಹೋರಾಟವನ್ನು ಅಟಲ್ ಬಿಹಾರಿ ವಾಜಪೇಯಿರವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಂದು ವಿರೋಧ ಪಕ್ಷದಲ್ಲಿ ಇದ್ದೆವು ಎಂದರು.
ಯಡಿಯೂರಪ್ಪ, ಅನಂತ್ ಕುಮಾರ್ ಮತ್ತು ಕಾರ್ಯಕರ್ತರ ಶ್ರಮದಿಂದ ದಕ್ಷಿಣ ಭಾರತದ ಹೆಬ್ಬಾಗಿಲು ಕರ್ನಾಟಕವಾಗಿದೆ. ರಾಜ್ಯದಲ್ಲಿ ಎರಡು ಬಾರಿ ಅಧಿಕಾರ ಅನುಭವಿಸಿದ್ದೇವೆ, ನಮ್ಮ ಬಿಜೆಪಿ ಸರ್ಕಾರವಿದ್ದಾಗ ಬೆಂಗಳೂರು ನಗರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ ಎಂದರು.
ಕಾರ್ಯಕರ್ತರ ಮತ್ತು ಮುಖಂಡರ ನಡುವೆ ಉತ್ತಮ ಒಡನಾಟವಿಲ್ಲದ ಇರುವ ಕಾರಣ, ಸ್ವಹಿತಾಸಕ್ತಿ ನಾನು, ನನ್ನ ಸಂಬಂಧಿಕರು ಮಾತ್ರ ರಾಜಕೀಯ ಅಧಿಕಾರ ಅನುಭವಿಸಬೇಕು ಎಂಬ ದುರಾಸೆಯಿಂದ ಕಾರ್ಯಕರ್ತರು ನಿರಾಸಕ್ತಿ ಹೊಂದಿದ್ದಾರೆ, ಮುಖಂಡರಿಗೆ ಎಷ್ಟು ಗೌರವ ಕೊಡುತ್ತೇವೆಯೆ ಅಷ್ಟೆ ಗೌರವ ಕಾರ್ಯಕರ್ತನಿಗೂ ಕೊಡಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.
ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.



