ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಲ್ಲಿ ಸಿಲುಕಿರುವ ಬಿಜೆಪಿ ನಾಯಕ ಸಿ.ಟಿ.ರವಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮ್ಮ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಿ ಟಿ ರವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ.
ಈ ಕುರಿತು ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಮಹಿಳೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲಾದ ಮಾತು, ಮಾತನಾಡಿದ್ದರೆ ಅಥವಾ ಸನ್ನೆ ಮಾಡಿದ್ದರೆ ಅದು ಖಂಡಿತವಾಗಿಯೂ ಅವರ ನಮ್ರತೆಯನ್ನು ಅತಿರೇಕಗೊಳಿಸುತ್ತದೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಅದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ಹೇಳಿದ್ದಾರೆ.
ಸಿ ಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದರು. ಇದೇ ವೇಳೆ ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಸಿ ಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ ಸಿಟಿ ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸೆಂಬರ್ 19, 2024 ರಂದು ಬೆಳಗಾವಿ ಜಿಲ್ಲೆಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ರಾಜ್ಯ ಸರ್ಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ(CID) ವರ್ಗಾಯಿಸಿದೆ.




