ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸಂಘಟನೆ ತೀವ್ರ ಸ್ವರೂಪವಾಗಿ ಕುಸಿತ ಕಂಡಿದೆ. ಸಂಘಟನೆಯನ್ನು ಬಲಪಡಿಸಬೇಕಾದ ನಾಯಕರು ಹೊಂದಾಣಿಕೆ ರಾಜಕಾರಣದಲ್ಲಿ ನಿರತರಾಗಿದ್ದಾರೆ ಎಂಬ ಅಂಶವನ್ನು ವರಿಷ್ಟರ ಗಮನಕ್ಕೆ ತಂದಿದ್ದೇವೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಎಂದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮ್ಮ ದೆಹಲಿಯ ಭೇಟಿ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವಂತೆ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ನಮಗೆ ಸೂಚನೆ ನೀಡಿದ್ದಾರೆ. ಅವರು ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಆಧರಿಸಿ ಪಕ್ಷ ಸಂಘಟನೆಯಲ್ಲಿ ತೊಡಗಲು ತೀರ್ಮಾನಿಸಿದ್ದೇವೆ ಎಂದರು.
ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಂತೆ ಪ್ರತಿಕ್ರಿಸಿದ ಅವರು ನಮ್ಮ ವಿಜಯೇಂದ್ರ ಹಠಾವೋ ಹೋರಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದಕ್ಕೆ ಪೂರಕವಾಗಿ ಕೆಲವೊಂದು ಅಂಶಗಳನ್ನು ವರಿಷ್ಠ ಗಮನಕ್ಕೆ ತಂದಿದ್ದು ಅದರಂತೆ ಅವರು ಮುಂದುವರೆಯುವ ಭರವಸೆ ನೀಡಿದ್ದಾರೆ ಎಂದರು.




