ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಯಿಂದ ಧರ್ಮಾಸ್ತ್ರ ಪ್ರಯೋಗಕ್ಕೆ ಸಿದ್ಧತೆ
ಬೆಂಗಳೂರು: ಸದ್ಯದಲ್ಲಿಯೇ ನಡೆಯಲಿರುವ ಜಿಲ್ಲಾ , ತಾಲ್ಲೂಕು ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಪಣತೊಟ್ಟಿರುವ ಬಿಜೆಪಿ ಇದಕ್ಕೆ ಧರ್ಮಾಸ್ತ್ರ ಪ್ರಯೋಗಿಸಲು ತೀರ್ಮಾನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸದ್ಯದಲ್ಲೇ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಹೈಕಮಾಂಡ್ ಸೂಚನೆಯ ಮೇರೆಗೆ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ ಮತ್ತು ಪ್ರಹಲ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಿತು.
ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಮಂಡಲದ ಉಭಯ ಸದನಗಳ ವಿಪಕ್ಷ ನಾಯಕರದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಪಕ್ಷದ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಕೆಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ , ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ರಾಜ್ಯ ನಾಯಕರಿಗೆ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಬೋಧಿಸಿದರು.
ಪಕ್ಷದ ಸೈದ್ಧಾಂತಿಕ ವಿಚಾರಧಾರೆ ಹಾಗೂ ಭವಿಷ್ಯದಲ್ಲಿ ಎದುರಾಗುವ ಚುನಾವಣೆಯಲ್ಲಿ ಸರಕಾರದ ವಿರುದ್ಧ ನಡೆಸಬೇಕಾದ ಹೋರಾಟದ ಬಗ್ಗೆ ರಣತಂತ್ರ ರೂಪಿಸುವ ಕುರಿತಂತೆ ಹಲವಾರು ವಿಷಯಗಳನ್ನು ಚರ್ಚೆ ನಡೆಸಲಾಯಿತು.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ನಡೆಸುತ್ತಿರುವ ಜಾತಿವಾರು ಜನಗಣತಿಯನ್ನು ಪ್ರಮುಖವಾಗಿಟ್ಟುಕೊಂಡು ಪಕ್ಷವನ್ನು ಸಂಘಟಿಸಬೇಕು ರಾಜ್ಯ ಸರ್ಕಾರ ಜಾತಿವಾರು ಜನಗಣತಿಯ ಹೆಸರಲ್ಲಿ ಸಮಾಜವನ್ನು ಒಡೆಯುತ್ತಿದೆ. ಜಾತಿ ಜಾತಿಗಳ ನಡುವೆ ಕಂದಕ ನಿರ್ಮಾಣ ಮಾಡುತ್ತಿದೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಕ್ರಿಶ್ಚಿಯನ್ ಎಂದು ಮರುನಾಮಕರಣ ಮಾಡಿರುವ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಬೇಕು ಎಂದು ತಿಳಿಸಿದ್ದಾರೆ.
ಸಂವಿಧಾನದ ಪ್ರಕಾರ ದೇಶದಲ್ಲಿ ಕೇವಲ ಐದು ಧರ್ಮಗಳಿಗೆ ಮಾತ್ರ ಮಾನ್ಯತೆ ಇದೆ. ಆದರೆ ರಾಜ್ಯದ ಹಿಂದುಳಿದ ವರ್ಗಗಳ ಸಮೀಕ್ಷಾ ಪಟ್ಟಿಯಲ್ಲಿ ಇತರೆ ಧರ್ಮ ಎಂಬ ವಿಷಯವನ್ನು ಸೇರಿಸಲಾಗಿದೆ. ಇದನ್ನು ಗ್ರಾಮೀಣ ಪ್ರದೇಶದಲ್ಲಿ ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಈ ಸರ್ಕಾರ ಧರ್ಮವನ್ನು ಒಡೆಯುತ್ತಿದೆ ಎಂಬುದಾಗಿ ತಿಳಿಸಬೇಕು. ಚುನಾವಣೆಯಲ್ಲಿ ಇದನ್ನೇ ಪ್ರಮುಖ ಅಸ್ತ್ರವಾಗಿಸಬೇಕು ಎಂದು ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.
ಅಭಿವೃದ್ಧಿಯ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ಜೊತೆಗೆ ಬಿಪಿಎಲ್ ಪಡಿತರ ಚೀಟಿ ರದ್ದು ಮತ್ತು ಜಾತಿವಾರು ಜನಗಣತಿ ವಿಷಯವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಜನಾಂದೋಲನ ರೂಪಿಸಬೇಕು ಈ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ದೊಡ್ಡ ಪ್ರಮಾಣದ ಗೆಲುವು ಸಾಧಿಸಬಹುದು ಇದರಿಂದಾಗಿ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ಸಹಕಾರಿಯಾಗಲಿದೆ ಎಂಬ ಅಂಶವನ್ನು ಕೆಲವೊಂದು ದಾಖಲೆಗಳ ಸಹಿತ ಮನದಟ್ಟು ಮಾಡಿಕೊಟ್ಟರು ಎಂದು ಗೊತ್ತಾಗಿದೆ.
ನಾಯಕತ್ವ ವಿಚಾರವಾಗಿ ಪಕ್ಷದ ರಾಜ್ಯಮಟ್ಟದಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳಿವೆ ಅದು ಹೈಕಮಾಂಡ್ ಗಮನಕ್ಕೆ ಬಂದಿದೆ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಪ್ರಕ್ರಿಯೆಗಳು ಆರಂಭಗೊಂಡಿದೆ ತಳಮಟ್ಟದಲ್ಲಿ ಈ ಗೊಂದಲಗಳ ಬಗ್ಗೆ ಯಾವುದೇ ಚರ್ಚೆಗೆ ಅವಕಾಶ ನೀಡದೆ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ಸೂಚಿಸಿದ್ದಾರೆ.




