ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರ ಆಯ್ಕೆಗೆ ಇದ್ದ ಎಲ್ಲಾ ಅಡೆತಡೆಗಳು ಸದ್ಯದಲ್ಲಿಯೇ ಇತ್ಯರ್ಥವಾಗುವ ಲಕ್ಷಣಗಳು ಕಾಣಿಸುತ್ತಿವೆ. ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರ ಆಯ್ಕೆ ಕುರಿತು ಸಂಘ ಪರಿವಾರದ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಮಾತುಕತೆ ಬಾಕಿ ಇರುವಂತೆಯೇ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಕುರಿತು ಸಂಘ ಪರಿವಾರದ ನಾಯಕರು ಮತ್ತು ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾತುಕತೆ ನಡೆಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರಕ್ಕೆ ಸ್ವಯಂಸೇವಕ ಸಂಘದ ಬೌದ್ಧಿಕ ಪ್ರಮುಖ್ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಕುರಿತು ಸಂಘ ಪರಿವಾರದ ನಾಯಕನ ಜೊತೆ ಮಾತುಕತೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಜೊತೆಗೆ ಕಾಲಿ ಉಳಿದಿರುವ ಪಕ್ಷದ ಸಂಘಟನಾ ಕಾರ್ಯದರ್ಶಿ ಹುದ್ದೆಯ ನೇಮಕಕ್ಕೆ ಜೆ.ಪಿ.ನಡ್ಡಾ ಒಲವು ವ್ಯಕ್ತಪಡಿಸಿದ್ದು, ಬೌದ್ದಿಕ್ ಸಭೆ ನಂತರ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಸರು ಅಂತಿಮಗೊಳಿಸಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸುವ ಕುರಿತು ಜೆ ಪಿ ನಡ್ಡಾ ಅವರು ಸಂಘ ಪರಿವಾರದ ನಾಯಕರ ಅಭಿಪ್ರಾಯ ಕೋರಿದ್ದು ಈ ಬಗ್ಗೆ ಸಂಘದ ನಾಯಕರು ತಮ್ಮ ನಿರ್ಧಾರ ತಿಳಿಸಲಿದ್ದಾರೆ ಎಂದು ಗೊತ್ತಾಗಿದೆ.
ಈ ನಡುವೆ ಸಂಘ ಪರಿವಾರದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಪಕ್ಷದ ರಾಜ್ಯ ಘಟಕದಲ್ಲಿ ನಡೆದಿರುವ ವಿದ್ಯಮಾನಗಳು ವಿವಿಧ ಜಿಲ್ಲಾ ಅಧ್ಯಕ್ಷರ ನೇಮಕ ಹಾಗೂ ರಾಜ್ಯ ವಿಧಾನ ಮಂಡಲದಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದರು.
ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿರುವ ಹನಿ ಟ್ರ್ಯಾಪ್ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಿದ್ದು, ಇದರ ವಿರುದ್ಧ ಹೋರಾಟ ನಡೆಸುವ ಕುರಿತು ಅಭಿಪ್ರಾಯ ಕೇಳಿದ್ದಾರೆ ಎಂದು ಗೊತ್ತಾಗಿದೆ.
ಸರ್ಕಾರದ ಕಾಮಗಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನೂತನ ಮಸೂದೆ ವಿರೋಧಿಸಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ರೂಪಿಸುವಂತೆ ನಡ್ಡಾ ಅವರು ವಿಜಯೇಂದ್ರ ಅವರಿಗೆ ಸಲಹೆ ಮಾಡಿದ್ದು, ಸಂಘ ಪರಿವಾರದ ಸಭೆಯ ನಂತರ ಹೋರಾಟದ ರೂಪುರೇಷೆಗಳು ನಿರ್ಧಾರವಾಗಲಿವೆ.



