ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

3 years ago

#BJP #protests #against #Congress #government

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ‌ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ‌ಜನ ಸಾಮಾನ್ಯರ ಹಿತವನ್ನು ಮರೆತಿದೆ. ರೈತ ವಿರೋಧಿ ನೀತಿಗಳ ಮೂಲಕ ಕೃಷಿಕ ಸಮುದಾಯವನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿ ಬಿಜೆಪಿ ರೈತ‌ ಮೋರ್ಚಾ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಪಕ್ಷದ ಮುಖಂಡ ಸಿ.ಟಿ.ರವಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರಕಾರವು ರೈತರ, ಜನಹಿತವನ್ನು ಕಾಪಾಡುತ್ತಿದೆ. ಆದರೆ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದಲ್ಲಿ ನೀರಾವರಿಗೂ ಹಣ ಇಲ್ಲ; ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಸೇರಿ ಅನೇಕ ಯೋಜನೆಗಳು ರದ್ದಾಗಿವೆ. ರೈತರ ಬೆನ್ನುಮೂಳೆ ಮುರಿಯಲು ಸರಕಾರ ಮುಂದಾಗಿದೆ ಎಂದು ಟೀಕಿಸಿದರು.

ಇದು ಜನವಿರೋಧಿ ಸರಕಾರ. ಮತಬ್ಯಾಂಕಿನ ರಾಜಕಾರಣಕ್ಕಾಗಿ ಸರಕಾರದ ಬೊಕ್ಕಸವನ್ನು ಲೂಟಿ ಮಾಡಿ ರೈತರ ಸರ್ವನಾಶ ಮಾಡಲು ಈ ಕಾಂಗ್ರೆಸ್ ಸರಕಾರ ಹೊರಟಿದೆ ಎಂದು‌ ಕಿಡಿಕಾರಿದರು.

ಈ ಸರಕಾರದ ಆಡಳಿತದ ಕೇವಲ 80 ದಿನಗಳಲ್ಲಿ ರಾಜ್ಯದ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪೂರಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದಾರೆ. ಈ ಸರಕಾರ ಬದುಕಿಲ್ಲ ದಲಿತರು, ಬಡವರು, ರೈತರು ಸೇರಿದಂತೆ ಜನ ಸಾಮಾನ್ಯರು ಪರಿತಪಿಸುವಂತಾಗಿದೆ ಎಂದು ದೂರಿದರು.

ಕೇಂದ್ರ ಸರಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಿದೆ. ನೀವು ಕೂಡ ಬೆಂಬಲ ಬೆಲೆ ಯೋಜನೆ ಜಾರಿ ಮಾಡಿ, ರಾಗಿ ಖರೀದಿ ಆರಂಭಿಸಿ. ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಜೆಪಿ ಸರಕಾರ ಕೊಡುತ್ತಿದ್ದ 4 ಸಾವಿರವನ್ನು ಮುಂದುವರಿಸಿ. 6 ಸಾವಿರ ಕೊಟ್ಟು ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಸವಾಲೆಸೆದರು.

Leave a Reply