ಬೆಂಗಳೂರು: ‘ BS Yediyurappa ಅವರು ಸರ್ಕಾರ ರಚನೆಯಾದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದರು. ಈ ವೇಳೆಯಲ್ಲಿ ಬಿಜೆಪಿ ಅವರನ್ನು ಕಣ್ಣೀರು ಹಾಕಿಸಿ ಕಳಿಸಿತ್ತು. ಈಗ Basavaraj Bommai ಅವರು ಮುಖ್ಯಮಂತ್ರಿಯಾಗಿ ಮೊದಲನೇ ವರ್ಷದ ವಾರ್ಷಿಕೋತ್ಸವದ ಸಡಗರದಲ್ಲಿದ್ದರು. ಇಂತಹ ಸಂದರ್ಭದಲ್ಲಿ ಅವರ ಖುಷಿಗೆ ತಣ್ಣೀರು ಎರಚಿ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ವೇದಿಕೆ ಸಜ್ಜುಗೊಳಿಸುತ್ತಿದೆ. ತಮ್ಮ ಆಡಳಿತದ 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #puppetcm ಅವರಿಗೆ ಸಂಪುಟ ಸಂಕಟ ಬಗೆಹರಿಸಲು ಆಗದೇ ಇರುವುದೇ ಇದಕ್ಕೆ ಸಾಕ್ಷಿ! ಎಂದು ಕೆಪಿಸಿಸಿ ಹೇಳಿದೆ.
ಬಿಜೆಪಿ ಹೈಕಮಾಂಡಿಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ #PuppetCM ಇದ್ದಹಾಗೆ,
ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಬಿ. ಎಸ್ ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೊಂಬೆ ಬೊಮ್ಮಾಯಿ ಅವರು ಯಾವ ಲೆಕ್ಕ ಅವರಿಗೆ! ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗಾಗಿ ‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ಮತ್ತು ವೈಫಲ್ಯಗಳ ಕೊಡ ತುಂಬಿದೆ ಎಂದು ಹೇಳಿದೆ.



