ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಈ ಕೂಡಲೇ ಹುದ್ದೆಯಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹೇಮಂತ್ ನಿಂಬಾಳ್ಕರ್ ಅವರು ತಮ್ಮ ಅಧಿಕಾರ ಬಳಸಿಕೊಂಡು ತಮ್ಮ ಪತ್ನಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಮಾಹಿತಿ ಸಿಕ್ಕಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಕಾರಣದಿಂದಾಗಿ ತಕ್ಷಣ ಅವರನ್ನು ವರ್ಗಾವಣೆ ಮಾಡಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಅವಕಾಶ ಮಾಡಿಕೊಡುವಂತೆ ಬಿಜೆಪಿಯ ನಾಯಕರು ಚುನಾವಣಾ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.



