ಬೆಂಗಳೂರು: ಬಿಜೆಪಿಗೆ ನಾಚಿಕೆಯಾಗಬೇಕು. ಮೊದಲು ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಡಿಸಿಎಂ ಡಿಕೆಶಿವಕುಮಾರ್ ಸವಾಲು ಹಾಕಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗೂಗಲ್ ಹೂಡಿಕೆ ಕರ್ನಾಟಕ ಬಿಟ್ಟು ಹೋಗುತ್ತಿರುವ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿಯ ಆಡಳಿತದ ಅವಧಿಯಲ್ಲಿ ಕಿರುಕುಳಕ್ಕಾಗಿ ಎಷ್ಟು ಉದ್ಯಮಿಗಳು ದೇಶ ಬಿಟ್ಟು ಹೋಗಿದ್ದರು ಎಂಬುದನ್ನು ನೋಡಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಕಷ್ಟು ಹೂಡಿಕೆಯಾಗುತ್ತಿದೆ ಎಂದಿದ್ದಾರೆ.
ನಮ್ಮ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇವರಿಬ್ಬರೂ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ರಾಜ್ಯದಲ್ಲಿ ಎಷ್ಟು ಮಂದಿ ಹೂಡಿಕೆ ಮಾಡಿದ್ದಾರೆ ಎಂಬುದನ್ನು ತೋರಿಸುತ್ತೇವೆ ಎಂದರು.
ಕರ್ನಾಟಕ ರಾಜ್ಯ ಅಭಿವೃದ್ಧಿಗೆ, ಶಾಂತಿಗೆ ಜಾಗತಿಕವಾಗಿ ಹೆಸರುವಾಸಿಯಾಗಿದೆ. ಅದರಲ್ಲೂ ಬೆಂಗಳೂರಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ. ಆದರೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಸ್ಥಾನಮಾನಕ್ಕೆ ಚ್ಯುತಿ ಬಂದಿತ್ತು. ಸರ್ಕಾರದ ಕಿರುಕುಳ ಸಹಿಸಲಾರದೆ ಹಲವು ದೇಶ ಬಿಟ್ಟು ಹೋಗಿದ್ದರು ಎಂದರು.




