ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಘಟನೆ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ವಿವಿಧ ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು, ಮೈಸೂರು, ಮಂಗಳೂರು, ರಾಯಚೂರು ಸೇರಿದಂತೆ ರಾಜ್ಯದ ಅನೇಕ ಕಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸುತ್ತಿರುವ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ನೂರಾರು ಸಂಖ್ಯೆಯಲ್ಲಿ ಘೋಷಣೆ ಕೂಗುತ್ತಾ ಆಗಮಿಸಿದ ಕಾರ್ಯಕರ್ತರು ಗೃಹ ಸಚಿವರ ನಿವಾಸದತ್ತ ತೆರಳುತ್ತಿದ್ದಂತೆ ರಸ್ತೆ ಮಧ್ಯದಲ್ಲಿ ಎಲ್ಲರನ್ನೂ ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದರು.
ನೇಹಾ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಎಬಿವಿಪಿ ಕರೆ ಕೊಟ್ಟಿದ್ದು, ಅದರ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಈ ಪ್ರತಿಭಟನೆ ನಡೆಸಿದರು.
ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಗೃಹಸಚಿವ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೇಹಾ ಹತ್ಯೆ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.




