ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಲೆಕ್ಷನ್ ಕಿಂಗ್. ಹಿರಿಯ ನಾಯಕ ಯಡಿಯೂರಪ್ಪ ಅವರ ಹೆಸರನ್ನು ಹಾಳು ಮಾಡಿದ್ದೆ ವಿಜಯೇಂದ್ರ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಾಂಗ್ರೆಸ್ ನಾಯಕರು ರಾಜ್ಯದ ಬೊಕ್ಕಸ ಖಾಲಿ ಮಾಡಿ ಹೈಕಮಾಂಡ್ ಘಟನೆ ತುಂಬಿಸುತ್ತಿದ್ದಾರೆ ಎಂದು ವಿಜಯೇಂದ್ರ ಮಾಡಿರುವ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಡಿ ಕೆ ಶಿವಕುಮಾರ್, ರಾಜ್ಯದಲ್ಲಿ ಕಲೆಕ್ಷನ್ ಕಿಂಗ್ ಅಂತ ಯಾರಾದರೂ ಇದ್ದರೆ ಅದು ವಿಜಯೇಂದ್ರ ಎಂದರು.
ಯಾವ ಖಜಾನೆ, ಎಲ್ಲಿ ಖಾಲಿಯಾಗಿದೆ ಎಂದು ಪ್ರಶ್ನಿಸಿದ ಅವರು, ವಿಜಯೇಂದ್ರ ಅವರ ಕಲೆಕ್ಷನ್ನು ಅವರ ಅಕೌಂಟು ಮತ್ತು ವಹಿವಾಟುಗಳನ್ನು ಬಿಚ್ಚಿಡಬೇಕೇ ಎಂದು ಪ್ರಶ್ನಿಸಿದರು.
ವಿಜಯೇಂದ್ರ ಈ ರೀತಿ ಆರೋಪ ಮಾಡಿ ತಪ್ಪಿಸಿಕೊಂಡು ಹೋಗದೆ ವಿಧಾನಸಭೆಯಲ್ಲಿ ಮಾತನಾಡಲಿ. ಅವರ ಎಲ್ಲ ಜಾತಕ ಬಿಚ್ಚಿಡುತ್ತೇನೆ. ಪಕ್ಷದ ಅಧ್ಯಕ್ಷರಾಗಿ ಇತಿಮಿತಿಯಿಂದ ಮಾತನಾಡಬೇಕು. ಇಂತಹ ಆರೋಪಗಳಿಗೆ ಹೇಗೆ ಉತ್ತರ ಕೊಡಬೇಕು ಎಂದು ಗೊತ್ತಿದೆ. ಅವರು ವಿಧಾನಸಭೆಗೆ ಬರಲಿ ಎಂದು ಸವಾಲೆಸೆದರು.




