ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ, ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ.
2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಆಯುಧ ಪೂಜೆಗೆ ಪ್ರತಿ ಬಸ್ ಗೆ ಕೊಡುತ್ತಿದ್ದ ಹಣ ₹30.
ಮತ್ತೆ ಬಿಜೆಪಿ ಅವಧಿಯ 2019ರಿಂದ 2023ರವರೆಗೆ ಆಯುಧ ಪೂಜೆಗೆ ಕೊಡುತ್ತಿದ್ದ ಹಣ ₹100.
ಈಗ ಮತ್ತೆ ನಮ್ಮ ಸರ್ಕಾರ ಆಯುಧ ಪೂಜೆಗೆ 100 ರೂಪಾಯಿಯಿಂದ 250 ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ಸುಳ್ಳಿನ ಸರಮಾಲೆ ಕಟ್ಟುವ BJP Karnataka ಆಡಳಿತಾವಧಿಯಲ್ಲಿ ಹಬ್ಬದ ಸಂದರ್ಭದಲ್ಲೂ ಸಾರಿಗೆ ನೌಕರರಿಗೆ ವೇತನ ನೀಡದೆ ಕಣ್ಣೀರು ಹಾಕಿಸಿದ್ದನ್ನು ಜನತೆ ಮರೆತಿಲ್ಲ, ಬಸ್ಸುಗಳ ಪೂಜೆಗೆ ಹೂವು, ನಿಂಬೆಹಣ್ಣಿಗೂ ಹಣ ಕೊಡದೆ ನೌಕರರು ಸ್ವಂತ ಹಣದಿಂದ ಪೂಜೆ ಮಾಡಿದ್ದನ್ನು ರಾಜ್ಯದ ಜನ ಮರೆತಿಲ್ಲ.ಸಾರಿಗೆ ಸಂಸ್ಥೆಯ ಆಸ್ತಿಗಳನ್ನು ಅಡಮಾನ ಇಟ್ಟ ಕೀರ್ತಿ ನಿಮಗೇ ಸಲ್ಲಬೇಕು.
ಸಂಬಳ ನೀಡದೆ ನೌಕರರ ಮನೆಯ ಹಬ್ಬದ ಸಂಭ್ರಮ ಕಿತ್ತುಕೊಂಡಿದ್ದ ಬಿಜೆಪಿ ಸರ್ಕಾರಕ್ಕೆ ಮಕ್ಕಳು “ಸಿಎಂ ಅಂಕಲ್ ಸಂಬಳ ಕೊಡಿ” ಎಂದು ಅಂಗಲಾಚಿದ ಕರುಣಾಜನಕ ಸ್ಥಿತಿಯು ಇತಿಹಾಸವಾಗಿದೆ ಉಳಿದಿದೆ.
– ಕೆಪಿಸಿಸಿ




