ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಕೋರ್ಟ್ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಲಗ್ಗೆ ಹಾಕಲು ಯತ್ನಿಸಿದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಪಕ್ಷದ ರಾಜ್ಯ ಅಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ವಿಧಾನ ಪರಿಷತ್ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪಕ್ಷದ ಶಾಸಕರು, ಸಂಸದರು ಮತ್ತು ಹಿರಿಯ ನಾಯಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕೆಲಕಾಲ ಧರಣಿ ನಡೆಸಿ ವಿಧಾನಸೌಧದೊಳಗೆ ನುಗ್ಗಲು ಯತ್ನಿಸಿದರು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದರು.
ಇದಕ್ಕೂ ಮುನ್ನ ನಡೆದ ಧರಣಿ ಸಮಯದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿರುವುದು ನೂರಕ್ಕೆ ನೂರರಷ್ಟು ಸಾಬೀತಾಗಿದೆ. ಕೋರ್ಟ್ ಆದೇಶದಂತೆ ತನಿಖೆ ನಡೆಯಲಿ ಎಂದು ಕಾಯದೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೈತಿಕತೆ ಪ್ರದರ್ಶನ ಮಾಡಬೇಕು ಎಂದು ಆಗ್ರಹಿಸಿದರು.
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಉಳಿಸಿಕೊಂಡಿದ್ದರೆ ಮೊದಲು ಸಿದ್ದರಾಮಯ್ಯನವರ ರಾಜೀನಾಮೆ ಪಡೆಯಲಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜೊತೆ ರಾಜೀ ಮಾಡಿಕೊಂಡಿದೆ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲೊಡ್ಡಿದರು.
ಪಕ್ಷದ ಅಧ್ಯಕ್ಷ ವಿಜಯೇಂದ್ರ ಮಾತನಾಡಿ, ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿದ್ದಾಗ ಅವಧಿಯಲ್ಲಿ ಸಿದ್ದರಾಮಯ್ಯನವರು ನೈತಿಕತೆ ಬಗ್ಗೆ ಬಹಳ ಮಾತನಾಡಿದ್ದರು ಎಂದು ಟೀಕಿಸಿದ ಅವರು, ಕೂಡಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಮುಡಾ ಪ್ರಕರಣ ಸಿಬಿಐಗೆ ವಹಿಸಬೇಕು ಎಂದರು.
ಸಿದ್ದರಾಮಯ್ಯ ವಿರುದ್ಧ ಇಂದು ಎಫ್ಐಆರ್ ದಾಖಲಾಗುತ್ತದೆ. ಇಂಥ ಸಂದರ್ಭ ಬಂದಾಗ ಸಿದ್ದರಾಮಯ್ಯ ಮಾದರಿಯಾಗಿ ನಡೆದುಕೊಳ್ಳಬೇಕು. ಕ್ಲೀನ್ ಚಿಟ್ ತಗೊಂಡು ಮತ್ತೆ ಬಂದು ಸಿಎಂ ಆಗಲಿ. ಯಾರೂ ತಡೆಯುವುದಿಲ್ಲ. ರಾಜೀನಾಮೆ ಕೊಟ್ಟು ಕೆಳಗಿಳಿದು ನೈತಿಕವಾಗಿ ಸರಿ ಇದ್ದೀನಿ ಎಂಬುದನ್ನು ಸಿದ್ದರಾಮಯ್ಯ ತೋರಿಸಲಿ ಎಂದರು.




