ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆಗೆ ತೀವ್ರಗೊಂಡಿರುವ ಭಿನ್ನಮತದ ಪರಿಣಾಮ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ತಿಂದು ಎಸೆದ ಬಾಳೆ ಎಲೆ ಎಂದು ಬಣ್ಣಿಸಿದೆ.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಈ ಕುರಿತಂತೆ ತನ್ನ ಅಧಿಕೃತ ಜಾಲತಾಣ ಎಕ್ಸ್ ನಲ್ಲಿ ಹೇಳಿಕೆಯೊಂದನ್ನು ಪೋಸ್ಟ್ ಮಾಡಿದ್ದು, ಹತ್ತಿದ ಏಣಿಯನ್ನು ಒದೆಯುವುದು ಬಿಜೆಪಿಯ ಹಳೇ ಚಾಳಿ! ಆಪರೇಷನ್ ಕಮಲಕ್ಕೆ ಬಲಿಯಾದ ರಮೇಶ್ ಜಾರಕಿಹೊಳಿ ಪರಿಸ್ಥಿತಿಯೂ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
ಸ್ವಂತ ಶಕ್ತಿಯಿಂದ ಅಧಿಕಾರದ ಹಿಡಿಯಲು ಸಾಧ್ಯವಾಗದೆ, 2019ರಲ್ಲಿ ಅನೈತಿಕ ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿ ಸಮ್ಮಿಶ್ರ ಸರ್ಕಾರದ 17 ಶಾಸಕರನ್ನು ಸೆಳೆದು ಅಧಿಕಾರ ಅನುಭವಿಸಿದ ಬಿಜೆಪಿ, ಇಂದು ಅದೇ ಶಾಸಕರನ್ನು ಕಾಲಕಸದಂತೆ ಕಾಣುತ್ತಿದೆ ಎಂದಿದೆ.
ಕೆಲದಿನಗಳಿಂದ ತಣ್ಣಗಾಗಿದ್ದ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ನಡುವಿನ ವಾಕ್ಸಮರ ಮತ್ತೆ ಜೋರಾಗಿದೆ. ವಿಜಯೇಂದ್ರ ಮತ್ತು ಅವರ ಬೆಂಬಲಿಗರು ಕೊಟ್ಟ ಎಚ್ಚರಿಕೆಯಿಂದ ರೊಚ್ಚಿಗೆದ್ದಿರುವ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಪಕ್ಷದ ಅಧ್ಯಕ್ಷರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು



