ಬೆಂಗಳೂರು: ಗಡಿ ಜಿಲ್ಲೆ ಬೀದರ್ ನ ಗುತ್ತಿಗೆದಾರ ಸಚಿನ್ ಪಾಂಚಾಲ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ತಮ್ಮ ಹಾಗೂ ತಮ್ಮ ತಂದೆ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಟೂಲ್ ಕಿಟ್ ಸಿದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ ಖರ್ಗೆ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಆತ್ಮಹತ್ಯೆ ಪ್ರಕರಣದಲ್ಲಿ ಎಲ್ಲಿಯೂ ನನ್ನ ಪಾತ್ರ ಇಲ್ಲ. ಮೃತ ವ್ಯಕ್ತಿ ಬರೆದಿರುವ ಡೆತ್ ನೋಟ್ ನಲ್ಲೂ ನನ್ನ ಹೆಸರು ಉಲ್ಲೇಖಿಸಿಲ್ಲ. ಆದರೂ ನನ್ನ ಹಾಗೂ ನನ್ನ ಕುಟುಂಬದ ವರ್ಚಸ್ಸಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಕೆಲಸ ಮಾಡುತ್ತಿದ್ದಾರೆ ಎಂದರು.
ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ಪ್ರಕರಣವನ್ನು ನನ್ನ ಪ್ರಕರಣದೊಂದಿಗೆ ತಾಳೆ ಹಾಕಲಾಗುತ್ತಿದೆ. ಆಗ ಆತಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಬರೆದಿದ್ದ ಪತ್ರದಲ್ಲಿ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಹೇಳಿದ್ದರು. ಈಗ ನಡೆದಿರುವ ಸಚಿನ್ ಪಾಂಚಾಳ್ ಪ್ರಕರಣದಲ್ಲಿ ನನ್ನ ಹೆಸರು ಎಲ್ಲಿಯಾದರೂ ನಮೂದಾಗಿದೆಯೇ ಎಂದು ಪ್ರಶ್ನಿಸಿದರು.
ಕಲಬುರಗಿ ರಿಪಬ್ಲಿಕ್ ಎಂದು ಟೀಕೆ ಮಾಡುವ ಬಿಜೆಪಿ ನಾಯಕರಿಗೆ ತಾವು ನಾಲ್ಕೈದು ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಈವರೆಗೂ ಅದಕ್ಕೆ ಅವರಿಂದ ಉತ್ತರ ಬಂದಿಲ್ಲ. ಕಲಬುರಗಿ ಮುತ್ತಿಗೆ ಕಾರ್ಯಕ್ರಮಕ್ಕೂ ಮುನ್ನ ಉತ್ತರ ನೀಡಿ ನಂತರ ಅವರು ಪ್ರತಿಭಟನೆ ಮಾಡುವುದು ಸೂಕ್ತ ಎಂದರು.
ಮುನಿರತ್ನ, ಬಸನಗೌಡ ಪಾಟೀಲ್ ಯತ್ನಾಳ್ ಕನಿಷ್ಠ ಒಂದು ನೋಟಿಸ್ ನೀಡಲು ರಾಜ್ಯಬಿಜೆಪಿಯವರಿಗೆ ಸಾಧ್ಯವಾಗಿಲ್ಲ. ಅವರಲ್ಲಿರುವ ವಿವಿಧ ಬಣಗಳ ರಾಜಕೀಯದಿಂದ ಆಗುವ ಮುಜುಗರ ತಪ್ಪಿಸಲು ತಮ ವಿರುದ್ಧ ಆಧಾರರಹಿತ ಆರೋಪ ಮಾಡಲಾಗುತ್ತಿದೆ ಎಂದರು.




