ಮಂಗಳೂರು: ಎಸ್‌ಐಟಿ ತನಿಖೆ ನಿಲ್ಲಿಸಲು ಮಾಡಿರುವ ಷಡ್ಯಂತ್ರವಿದು. ಇದು ಬಿಜೆಪಿಯವರ ಪಾಪದ ಕೂಸು. ಅವರು ಸರ್ವನಾಶ ಆಗಿ ಹೋಗುತ್ತಾರೆ ಎಂದು ಹಿಂದುತ್ವ ಪರ ಮುಖಂಡ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಾಗ್ದಾಳಿ ನಡೆಸಿದರು.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜೀವಕ್ಕೆ ಏನಾದರೂ ಅಪಾಯ ಆದರೆ ಅದಕ್ಕೆ ರಾಜ್ಯ ಸರ್ಕಾರ ಮತ್ತು ಬಿಜೆಪಿಯೇ ಕಾರಣ ಎಂದರು.
ಇದೇ ವೇಳೆ ಸೌಜನ್ಯಾಗೆ ನ್ಯಾಯ ಸಿಗಬೇಕು. ನ್ಯಾಯ ಖಂಡಿತಾ ಸಿಗುತ್ತದೆ ಎಂದು ಘೋಷಿಸಿದರು.
ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಖಂಡಿಸಿ, ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅವರ ಅಭಿಮಾನಿಗಳು ಸೌಜನ್ಯಾಗೆ ನ್ಯಾಯ ಸಿಗಲಿ ಮತ್ತು ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದರು.




