ಖರ್ಗೆ ಹೇಳಿಕೆಯೇ ಅಂತಿಮ, ನಾಯಕತ್ವದ ಬಗ್ಗೆ ಇನ್ಮುಂದೆ ಚರ್ಚೆ ಬೇಡ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಭೇಟಿ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸಿದ್ದರಾಮಯ್ಯ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ಕೆ ಹರಿಪ್ರಸಾದ್, ಹಲವು ಪ್ರಮುಖ ವಿಚಾರಗಳ ಬಗ್ಗೆ ತಮ್ಮ ಖಡಕ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇದು ‘ಕುತೂಹಲ’ದ ಭೇಟಿಯಲ್ಲ, ‘ಸೌಜನ್ಯ’ದ ಭೇಟಿ: ಸಿಎಂ ಭೇಟಿಯ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದ ಹರಿಪ್ರಸಾದ್, ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ಕಳೆದ ಮೂರು ತಿಂಗಳುಗಳಿಂದ ನಾನು ಪಶ್ಚಿಮ ಬಂಗಾಳ ಮತ್ತು ಹರಿಯಾಣ ರಾಜ್ಯಸಭಾ ಚುನಾವಣೆಗಳಲ್ಲಿ ಬ್ಯುಸಿಯಾಗಿದ್ದೆ. ಹಾಗಾಗಿ ಸಿಎಂ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇದೊಂದು ಕೇವಲ ಸೌಜನ್ಯದ ಭೇಟಿಯಷ್ಟೇ ಎಂದರು.
ನಾಯಕತ್ವದ ಗೊಂದಲಕ್ಕೆ ಪೂರ್ಣವಿರಾಮ?: ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ಬೆಂಬಲಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪರಮೋಚ್ಛ ನಾಯಕರು. ಅವರು ಒಮ್ಮೆ ಹೇಳಿಕೆ ನೀಡಿದ ಮೇಲೆ ಅದು ಅಂತಿಮ. ಅದನ್ನು ಯಾರೂ ವ್ಯಾಖ್ಯಾನಿಸುವ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರು ಇನ್ಮುಂದೆ ನಾಯಕತ್ವದ ವಿಷಯದ ಬಗ್ಗೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.
ಸಚಿವ ಸಂಪುಟ ಪುನಾರಚನೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ಸಿಲಿಂಡರ್ ಬೆಲೆ ಏರಿಕೆ: ರಾಹುಲ್ ಗಾಂಧಿ ಭವಿಷ್ಯ ನಿಜವಾಗಿದೆ: ವಾಣಿಜ್ಯ ಅನಿಲ ಸಿಲಿಂಡರ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ರಾಹುಲ್ ಎಚ್ಚರಿಕೆ ನಿಜವಾಗಿದೆ. ಚುನಾವಣೆ ಮುಗಿದ ಮೇಲೆ ತೈಲ ಮತ್ತು ಅನಿಲ ಬೆಲೆ ಏರಿಕೆಯಾಗುತ್ತದೆ ಎಂದು ರಾಹುಲ್ ಗಾಂಧಿ ಮೊದಲೇ ಹೇಳಿದ್ದರು ಎಂದರು.
ಅಂದು ರಾಹುಲ್ ಮಾತುಗಳನ್ನು ಬಿಜೆಪಿ ಟ್ರೋಲ್ ಆರ್ಮಿ ಹಾಸ್ಯ ಮಾಡಿತ್ತು. ಆದರೆ ಇಂದು ಅವರ ಮಾತು ಅಕ್ಷರಶಃ ನಿಜವಾಗಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ ಎಂದರು.
ದಕ್ಷಿಣ ಭಾರತ ಬಿಜೆಪಿ ಮುಕ್ತ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಜಾಗವಿಲ್ಲ. ಶೀಘ್ರದಲ್ಲೇ ಇದು ‘ಬಿಜೆಪಿ ಮುುಕ್ತ ದಕ್ಷಿಣ ಭಾರತ’ ಆಗಲಿದೆ. ಇನ್ನು ಎರಡು ವರ್ಷಗಳಲ್ಲಿ ಕರ್ನಾಟಕದಿಂದಲೂ ಅವರನ್ನು ಕಿತ್ತೊಗೆಯಲಾಗುವುದು. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಕಠಿಣ ಸ್ಪರ್ಧೆಯಿದ್ದು, ಫಲಿತಾಂಶಕ್ಕಾಗಿ ಕಾಯೋಣ ಎಂದರು.



