ರಾಯಚೂರು: ಸುರಪುರ ಕ್ಷೇತ್ರದಲ್ಲಿ BJP Karnataka ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ. ಇದು ಅಪ್ಪಟ ಸುಳ್ಳು. ಮೋದಿಯಿಂದ ಹಿಡಿದು Amit Shah ಮತ್ತು ರಾಜೂಗೌಡನವರೆಗೂ ಎಲ್ಲರೂ ಸುಳ್ಳುಗಳ ಸರದಾರರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಪ್ರಜಾಧ್ವನಿ-2 ಜನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಇವರು ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ. ಇವರ ಸುಳ್ಳುಗಳನ್ನು ನಂಬಿ ಹತ್ತತ್ತು ವರ್ಷ ಮೋಸ ಹೋಗಿದ್ದು ಸಾಕು. ಇನ್ನೂ ಎಷ್ಟು ವರ್ಷ ಬಿಜೆಪಿಯ ಸುಳ್ಳುಗಳಿಗೆ ಮೋಸ ಹೋಗ್ತೀರಿ? ಎಂದು ಪ್ರಶ್ನಿಸಿದರು.
ಬಿಜೆಪಿಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಡಿ ಎಂದು ಕರೆನೀಡಿದರು.
ಮೊದಲ ಮತ್ತು ಎರಡನೆ ಹಂತದ ಚುನಾವಣೆಗಳಲ್ಲಿ Bharatiya Janata Party (BJP) ಸೋಲುತ್ತದೆ ಎನ್ನುವುದು ಮೋದಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಬಿಜೆಪಿಯವರೇ ಮಾಡಿಸಿರುವ ಸಮೀಕ್ಷೆಯಲ್ಲೇ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಬಂದಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ 200 ಸೀಟು ಗೆದ್ದರೆ ಹೆಚ್ಚು ಎನ್ನುವಂತಹ ಸ್ಥಿತಿ ಇದೆ. ಹೀಗಾಗಿ ಸೋಲಿಗೆ ಹೆದರಿ Narendra Modi, ಅಮಿತ್ ಶಾ, ರಾಜುಗೌಡ ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಈ ಸುಳ್ಳುಗಳಿಗೆ ಮರುಳಾಗಬೇಡಿ ಎಂದರು.
ರಾಯಚೂರು ಲೋಕಸಭೆ ಮತ್ತು ಸುರಪುರ ವಿಧಾನಸಭೆ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು ಎನ್ನುವುದು ನನ್ನ ಗುರಿ. ನನ್ನ ಗುರಿಯನ್ನು ನೀವೆಲ್ಲಾ ನಿಮ್ಮ ಗುರಿಯಾಗಿ ತೆಗೆದುಕೊಂಡು, ನನ್ನ ಕೈಗಳಿಗೆ ಬಲತುಂಬಿ ಎಂದು ಕೈಮುಗಿದು ಮನವಿ ಮಾಡಿದರು.




